ಬೆಂಗಳೂರು,ಫೆ.21- ದ್ವಿತೀಯ ಪಿಯುಸಿ ಪರೀಕ್ಷೆ ಮಾ.1 ರಿಂದ ಮಾ.22 ರವರೆಗೆ ಹಾಗು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾ.25ರಿಂದ ಏ.6ವರೆಗೆ ನಡೆಯಲಿದೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೆ ಸಿದ್ದತೆ ಆರಂಭಗೊಂಡಿದ್ದು ಶಾಲಾ.ಕಾಲೇಜುಗಳಲ್ಲಿ ಪೋರಕ ಪರೀಕ್ಷೆ ಆರಂಭಗೊಂಡಿದೆ.
ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ದ್ವಿತೀಯ ಪಿಯುಸಿಗೆ ರಾಜ್ಯಾದ್ಯಂತ 1124 ಪರೀಕ್ಷಾ ಕೇಂದ್ರಗಳನ್ನು ಗುರುತ್ತಿಸಲಾಗಿದ್ದು ಎಸ್‍ಎಸ್‍ಎಲ್‍ಸಿ ಗೆ 2747 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು
ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು.
ಮಾಡೆಲ್ ಆತ್ಮಹತ್ಯೆ ; ಕ್ರಿಕೆಟಿಗ ಅಭಿಷೇಕ್ ಶರ್ಮಾಗೆ ಸಮನ್ಸ್
ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾಕ್ಸರ್ï ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾಕ್ಸರ್ï ಮಾತ್ರ ತೆಗೆದುಕೊಳ್ಳಲಾಗುವುದು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡಿರುತ್ತದೆ ಒಟ್ಟಾರೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ ಎಂದು ತಿಳಿಸಿದರು.