ಪುಣೆ,ಮೇ.21-ಅಪ್ರಾಪ್ತ ಬಾಲಕ ಚಾಲನೆ ಮಾಡುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಇಲ್ಲಿ ಇಬ್ಬರು ಸಾವನ್ನಪ್ಪಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಂದೆಯನ್ನು ಪುಣೆ ಪೊಲೀಸರು ಔರಂಗಾಬಾದ್ನಲ್ಲಿ ಬಂಧಿಸಿದ್ದಾರೆ.
ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ನಡೆದಿದ್ದ ಈ ದುರ್ಘಟನೆಯಲ್ಲಿ 17 ವರ್ಷ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂಬುವವರು ಸಾವನ್ನಪ್ಪಿದ್ದರು .
ಅಪಘಾತದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಾಜು 200 ಕಿಮೀ ವೇಗದಲ್ಲಿ ಕಾರು ಚಲಿಸುತ್ತಿದೆ ಎಂದು ತಿಳಿದುಬಂದಿದೆ. ಪುಣೆಯ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಪ್ರಕಾರ, ಬಾಲಕ ತನ್ನ 12 ನೇ ತರಗತಿ ಪಾಸ್ಆದ ಹಿನ್ನಲೆಯಲ್ಲಿ ಸ್ಥಳೀಯ ಪಬ್ನಲ್ಲಿ ಸಂಭ್ರಮ ಆಚರಿಸುತ್ತಿದ್ದನು, ಅಲ್ಲಿ ಮದ್ಯ ಸೇವಿಸುತ್ತಿದ್ದ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾನೂನು ಪ್ರಕಾರ ಮದ್ಯ 25 ವಯಸ್ಸು ಆಗಿರುವವರಿಗೆ ಮಾತ್ರ ಸರಬರಾಜು ಮಾಡಬೇಕು ಹಾಗಾಗಿ ಪಬ್ ಮಾಲೀಕರು ಅಪ್ರಾಪ್ತ ವಯಸ್ಕರಿಗೆ ಮದ್ಯ ನೀಡದ ಆರೋಪವನ್ನೂ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಘಟನೆಯ ನಂತರದ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ಬಾಲಕನನ್ನು ವಶಕ್ಕೆ ಪಡೆಯಲಾಗಿತ್ತು ನಂತರ ಆತನಿಗೆ ಜಾಮೀನು ನೀಡಲಾಗಿತ್ತು ,ಅಸಡ್ಡೆ ,ಬೇಜವಾಬ್ದಾರಿ ನಡೆಯಿಂದಾಗಿ ಬಾಲಕನ ತಂದೆಯನ್ನು ಬಂಧಿಸಲಾಗಿದೆ.