ಬೆಂಗಳೂರು,ಆ.14- ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಫ್ಲೆಕ್ಸ್ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಹಡ್ಸನ್ ಸರ್ಕಲ್ನಲ್ಲಿ ಹಾಕಲಾಗಿದ್ದಟಿಪ್ಪು ಸುಲ್ತಾನ್ ಅವರ ಫ್ಲೆಕ್ಸ್ನ್ನು ಪುನೀತ್ ಕೆರೆಹಳ್ಳಿ ಮತ್ತು ಇತರರು ಹರಿದು ವಿರೂಪಗೊಳಿಸಿದ್ದರು.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಹಲಸೂರುಗೇಟ್ ಠಾಣೆ ಪೊಲೀಸರು ಇಂದು ನೆಲಗೆದರನಹಳ್ಳಿ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಠಾಣೆಗೆ ಕರೆತಂದು ವಿಚಾರಣೆ ನಡೆಸುವುದಾಗಿ ತಿಳಿಸಲಾಗಿದೆ.