ಶಾಲೆಗಳಲ್ಲಿ ಪುನೀತ್ ಅಭಿನಯದ ಗಂಧದಗುಡಿ ಚಿತ್ರದ ಉಚಿತ ಪ್ರದರ್ಶನ ಏರ್ಪಡಿಸಿ

Social Share

ಬೆಂಗಳೂರು,ನ.8- ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆ ಚಿತ್ರ ಗಂಧದ ಗುಡಿ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತ ಪ್ರದರ್ಶನ ನೀಡಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಸುನಿಲ್ ಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ. ಪುನೀತ್ ಅಭಿನಯದ ಗಂಧದ ಗುಡಿ ಚಿತ್ರದಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು, ವನ್ಯ ಜೀವಿಗಳ ವೈವಿಧ್ಯತೆಯನ್ನು ಮನಮುಟ್ಟುವಂತೆ ಚಿತ್ರಿಕರಿಸಲಾಗಿದ್ದು, ಈ ಚಿತ್ರ ಅದ್ಭುತವಾಗಿ ಮೂಡಿ ಬಂದಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ದೇಶದ ಪ್ರತಿ ಹಳ್ಳಿಗಳಲ್ಲಿ ಮತ್ತು ಗುಡ್ಡಗಾಡುಗಳಲ್ಲಿ ಇರುವ ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಭೂ ಜಗತ್ತಿಗೆ ಕಂಟಕವಾಗಿರುವ ಪ್ಲಾಸ್ಟಿಕ್ ಬಳಕೆ ತಡೆಗಟ್ಟುವುದು, ಕುಡಿಯುವ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸುವಂತೆ ತಿಳಿಹೇಳುವುದು,

ದೈವದತ್ತವಾಗಿ ಸೃಷ್ಟಿಯಾಗಿರುವ ನೈಸರ್ಗಿಕ ಸಂಪತ್ತು ಸಂರಕ್ಷಣೆ ಹಾಗೂ ವನ್ಯಜೀವಿಗಳ ಜೊತೆ ಮಾನವನ ಸಂಬಂಧ ಉತ್ತಮ ರೀತಿಯಲ್ಲಿರಬೇಕು ಎಂಬುದನ್ನು ಆರ್ಥಪೂರ್ಣವಾಗಿ ಸೆರೆ ಹಿಡಿಯಲಾಗಿರುವ ಗಂಧದ ಗುಡಿ ಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ಮಾಡುವ ಮೂಲಕ ಕನ್ನಡ ನಾಡು-ನುಡಿ-ಜಲ, ನೈಸರ್ಗಿಕ ಸಂಪತ್ತಿನ ಬಗ್ಗೆ ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಬೇಕು ಎಂದು ರಮೇಶ್ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

Articles You Might Like

Share This Article