ಅಪ್ಪು ಸಾಧನೆ ಪಠ್ಯವಾಗಲಿ : ಅಭಿಮಾನಿಗಳ ಆಗ್ರಹ

Social Share

ಬೆಂಗಳೂರು,ಅ.29- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜೀವನ ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವಂತೆ ಅವರ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಿ ನರಸೀಪುರದ ಮುಡುಕು ತೊರೆಯ ಅಪ್ಪು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.

ಇಂದು ಆರ್.ಟಿ.ನಗರದಲ್ಲಿರುವ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿ ಸಿಎಂಗೆ ಮನವಿ ಸಲ್ಲಿಸಿದ್ದೇವೆ ಎಂದು ಅಪ್ಪು ಅಭಿಮಾನಿಗಳ ಸಂಘದ ದೇವರಾಜ ಅರಸು ತಿಳಿಸಿದರು. ನಾವು ಈಗಾಗಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿಕೊಂಡಿದ್ದೇವೆ. ಒಟ್ಟಾರೆ, ಅಪ್ಪು ಅವರ ಜೀವನಗಾಥೆ ಪಠ್ಯಪುಸ್ತಕಕ್ಕೆ ಸೇರಬೇಕು ಎಂಬುದು ಎಲ್ಲ ಅಪ್ಪು ಅಭಿಮಾನಿಗಳ ಅಸೆಯಾಗಿದೆ ಎಂದರು.

ಪುನೀತ್ ಪ್ರಥಮ ಪುಣ್ಯಸ್ಮರಣೆಗೆ ಹರಿದುಬಂದ ಅಭಿಮಾನಿ ಸಾಗರ

ಅಪ್ರತಿಮ ಬಾಲ ಕಲಾವಿದರಾಗಿ ಗುರುತಿಸಿಕೊಂಡಿದ್ದ ಪುನೀತ್ ಅವರಿಗೆ 1985ರಲ್ಲೇ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ನಂತರ ಅವರು ನಾಯಕ ನಟರಾಗಿ ಅಭಿನಯಿಸಿರುವ ಎಲ್ಲ ಚಿತ್ರಗಳು ಕನ್ನಡಿಗರ ಮನ ಗೆದ್ದಿದೆ. ಇಂತಹ ಅಪ್ರತಿಮ ಕಲಾವಿದನ ಬದುಕು ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕವಾಗಲಿರುವುದರಿಂದ ನಮ್ಮ ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಾಥಮಿಕ ಇಲ್ಲವೆ ಪ್ರೌಢಶಾಲೆಯ ಯಾವುದಾದರೊಂದು ತರಗತಿಯ ಕನ್ನಡ ಪಠ್ಯದಲ್ಲಿ ಅಪ್ಪು ಜೀವನ ಸಾಧನೆ ಕಥೆಯನ್ನು ಸೇರಿಸುವುದು ಸೂಕ್ತ ಎಂದು ಅವರು ಸಲಹೆ ನೀಡಿದ್ದಾರೆ.

ಮತ್ತೊಂದು ಮೈಲಿಗಲ್ಲು ಸಾಧಿಸಲು ಇಸ್ರೋ ಸಿದ್ಧತೆ

ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ವರನಟ ಡಾ. ರಾಜ್ ಕುಮಾರ್ ಅವರ ಜೀವನ ಸಾಧನೆಯ ಪಠ್ಯ ಸೇರಿಸಲಾಗಿದೆ ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಬೇಕು ಎಂದು ಅವರು ಆಗ್ರಹಿಸಿದರು.
ಅಪ್ಪು ಅಭಿಮಾನಿಗಳ ಬೇಡಿಕೆ ಈಡೇರಿಸಲು ಸರ್ಕಾರ ಮನಸು ಮಾಡಲಿದೆ ಎಂದು ನಾವು ನಂಬಿದ್ದೇವೆ. ಒಂದು ವೇಳೆ ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ನಾವು ನ್ಯಾಯಸಮ್ಮತ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Articles You Might Like

Share This Article