ಪುರಂದರೇಶ್ವರಿಗೆ ಲೋಕಸಭೆಯ ಸ್ಪೀಕರ್‌ ಹುದ್ದೆ..?

ನವದೆಹಲಿ,ಜೂ.10- ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಲೋಕಸಭೆಯ ಸ್ಪೀಕರ್‌ ಆಯ್ಕೆಯತ್ತ ಚಿತ್ತ ಹರಿಸಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಈ ಬಾರಿ ಲೋಕಸಭೆಯ ಸ್ಪೀಕರ್‌ ಹುದ್ದೆಯೂ ಆಂಧ್ರಪ್ರದೇಶದ ಬಿಜೆಪಿ ಮುಖ್ಯಸ್ಥೆ ದಿವಂಗತ ಎನ್‌.ಟಿ.ರಾಮರಾವ್‌ ಪುತ್ರಿಯೂ ಆಗಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಸದಸ್ಯೆ ದಗ್ಗುಬಾಟಿ ಪುರಂದರೇಶ್ವರಿ(ಡಿ.ಪುರಂದರೇಶ್ವರಿ) ಲೋಕಸಭೆಯ ಸ್ಪೀಕರ್‌ ಆಗುವ ಸಾಧ್ಯತೆ ಇದೆ. ಒಂದು ವೇಳೆ ಇದು ಸಾಧ್ಯವಾದಲ್ಲಿ ಅತ್ಯಂತ ಮಹತ್ವದ ಹುದ್ದೆ ಎನಿಸಿದ ಲೋಕಸಭೆಯ ಸ್ಪೀಕರ್‌ ಹುದ್ದೆ ಅಲಂಕರಿಸಿದ ಭಾರತದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪುರಂದರೇಶ್ವರಿ ಪಾತ್ರರಾಗಲಿದ್ದಾರೆ. ಈ ಹಿಂದೆ ಲೋಕಸಭೆಯ ಮೊದಲ ಸ್ಪೀಕರ್‌ ಎಂಬ ಹೆಗ್ಗಳಿಕೆಗೆ ಭಾರತದ ಉಪಪ್ರಧಾನಿ ಜಗಜೀವನ್‌ ರಾವ್‌ ಪುತ್ರಿಯಾಗಿದ್ದ ಮೀರಾಕುಮಾರ್‌ , ನಂತರ 2014ರಲ್ಲಿ ಮೋದಿ ನೇತೃತ್ವದ ಮೊದಲ ಸರ್ಕಾರದಲ್ಲಿ ಬಿಜೆಪಿ ಹಿರಿಯ ಸದಸ್ಯೆ ಸುಮಿತ್ರಾ ಮಹಾಜನ್‌ ಹುದ್ದೆಯನ್ನು ನಿಭಾಯಿಸಿದ ಕೀರ್ತಿ ಸಲ್ಲುತ್ತದೆ. ಸರ್ಕಾರ ರಚನೆಯಾಗುವ ಮುನ್ನ ಲೋಕಸಭೆಯ ಸ್ಪೀಕರ್‌ ಹುದ್ದೆಯನ್ನು ತಮಗೆ ನೀಡಬೇಕೆಂಬ ಬೇಡಿಕೆಯನ್ನು ಮಿತ್ರ ಪಕ್ಷವಾದ ಟಿಡಿಪಿ … Continue reading ಪುರಂದರೇಶ್ವರಿಗೆ ಲೋಕಸಭೆಯ ಸ್ಪೀಕರ್‌ ಹುದ್ದೆ..?