ಲಂಡನ್,ಜ.30- ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಜೀವ ಬೆದರಿಕೆ ಹಾಕಿದ್ದರು ಎಂಬ ಅಂಶ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉಕ್ರೇನ್ ಮೇಲೆ ದಾಳಿ ನಡೆಸುವುದಕ್ಕೂ ಮುನ್ನ ಪುಟಿನ್ ಅವರು, ನನಗೆ ಕರೆ ಮಾಡಿ ನಿನ್ನ ಮೇಲೆ ಕ್ಷಿಪಣಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಬೋರಿಸ್ ಜಾನ್ಸನ್ ಹೇಳಿಕೆ ನೀಡಿದ್ದಾರೆ.
ಪುಟಿನ್ ವಿರುದ್ಧ ಜಾನ್ಸನ್ ಮಾಡಿರುವ ಆರೋಪ ಕುರಿತ ಬಿಬಿಸಿ ಸಾಕ್ಷ್ಯ ಚಿತ್ರ ಇಂದು ಪ್ರಸಾರವಾಗಿದ್ದು, ಎಲ್ಲೆಡೆ ಬಾರಿ ಚರ್ಚೆಗೆ ಗ್ರಾಸವಾಗಿದೆ. ಜಾನ್ಸನ್ ಮತ್ತು ಇತರ ಪಾಶ್ಚಿಮಾತ್ಯ ನಾಯಕರು ಉಕ್ರೇನ್‍ಗೆ ಬೆಂಬಲ ಸೂಚಿಸಿದ್ದರು ಮಾತ್ರವಲ್ಲ ದಾಳಿ ನಿಲ್ಲಿಸುವಂತೆ ರಷ್ಯಾ ಮೇಲೆ ಒತ್ತಡ ಹೇರಲು ಮುಂದಾಗಿದ್ದರು.
ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಇಂತಹ ಸಂದರ್ಭದಲ್ಲಿ ನನಗೆ ಕರೆ ಮಾಡಿದ್ದ ಪುಟಿನ್ ಅವರು, ನಾನು ನಿನ್ನನ್ನು ನೋಯಿಸಲು ಬಯಸುವುದಿಲ್ಲ, ಆದರೆ ನಿನ್ನ ಮೇಲೆ ಕ್ಷಿಪಣಿ ದಾಳಿ ನಡೆಸಲು ಒಂದು ನಿಮಿಷ ಸಾಕು ಎಂದು ಬೆದರಿಸಿದ್ದರು ಎಂದು ಜಾನ್ಸನ್ ಹೇಳಿಕೆ ನೀಡಿದ್ದಾರೆ.
ಉಕ್ರೇನ್ ಅಧ್ಯಕ್ಷ ವ್ಲಾದಿಮೀರ್ ಝೆಲೆನ್ಸ್ಕಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬೋರಿಸ್ ಜಾನ್ಸನ್ ಅವರ ಮೇಲೆ ಪುಟಿನ್ ಅವರಿಗೆ ಅಗಾಧವಾದ ಕೋಪವಿತ್ತು. ಹೀಗಾಗಿ ನನಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದರು ಎಂದು ಜಾನ್ಸನ್ ಹೇಳಿಕೊಂಡಿದ್ದಾರೆ.
Putin, threatened, kill me, missile, attack, Boris Johnson,