Monday, May 6, 2024
Homeರಾಜ್ಯಪಿಎಸ್‍ಐ ಹಾಗೂ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಸಿಬಿ ತನಿಖೆ

ಪಿಎಸ್‍ಐ ಹಾಗೂ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಸಿಬಿ ತನಿಖೆ

ಬೆಂಗಳೂರು,ಜ.20- ಪಿಎಸ್‍ಐ ಹಾಗೂ ಸಿಟಿಐ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಬಗ್ಗೆ ಖಚಿತ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿರುವ ಅವರು, ಈ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿರಬಹುದೆಂಬ ಶಂಕೆ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

ಪರೀಕ್ಷೆಗೆ ಸಂಬಂಧಪಟ್ಟಂತೆ ಗುಪ್ತದಳದ ಸಬ್ ಇನ್ಸ್‍ಪೆಕ್ಟರ್‍ರೊಬ್ಬರು ಪ್ರಶ್ನೆಪತ್ರಿಕೆನೀಡುವುದಾಗಿ ಪರೀಕ್ಷಾರ್ಥಿಗಳಿಗೆ ಆಮಿಷವೊಡ್ಡುವ ಆಡಿಯೋ ವೈರಲ್ ಆಗಿತ್ತು. ಆಡಿಯೋ ಗಮನಿಸಿದ ಪರೀಕ್ಷಾರ್ಥಿಗಳು ಹಾಗೂ ಕೆಲವು ಪೋಷಕರು ನಿನ್ನೆ ಚಂದ್ರಾ ಲೇ ಔಟ್ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪಿಎಸ್‍ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದರು.

ಆ ದೂರನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದಾರೆ.
ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ಪಿಎಸ್‍ಐಯನ್ನು ವಶಕ್ಕೆ ಪಡೆದು ಆಡಿಯೋ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆಯೇ ಅಥವಾ ಯಾವುದಾರೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಮಾನದಲ್ಲಿ ಯುವತಿಯರ ಸ್ನಾನದ ದೃಶ್ಯ ಸೆರೆ ಹಿಡಿಯುತ್ತಿದ್ದವನ ಬಂಧನ

ವೈರಲ್ ಆಗಿರುವ ಆಡಿಯೋದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಅಲ್ಲದೆ ಪ್ರಶ್ನೆಪತ್ರಿಕೆ ಖುದ್ದಾಗಿ ಕೊಡುವುದಾಗಿ ಹೇಳಿರುವುದು, ಪೋಸ್ಟಿಂಗ್ ಕೊಡಿಸುವುದಾಗಿಯೂ ಪಿಎಸ್‍ಐ ಆಮಿಷವೊಡ್ಡಿರುವುದು ಅಭ್ಯರ್ಥಿಗಳಲ್ಲಿ ಆತಂಕವುಂಟು ಮಾಡಿದೆ. ಇಂದು ಮತ್ತು ನಾಳೆ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ ಪೆಕ್ಟರ್ (ಸಿಟಿಐ) ಹುದ್ದೆಗೆ ಹಾಗೂ ಜ.23 ರಂದು ಪಿಎಸ್‍ಐ ಪರೀಕ್ಷೆ ನಡೆಯಲಿದೆ.

RELATED ARTICLES

Latest News