Friday, November 22, 2024
Homeಇದೀಗ ಬಂದ ಸುದ್ದಿಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ : ಆರ್.ಅಶೋಕ್

ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ : ಆರ್.ಅಶೋಕ್

ಬೆಂಗಳೂರು,ಫೆ.11- ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ ಎಂದು ರಾಜ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರದ ಮೇಲೆ ಶೇ.40ರಷ್ಟು ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರೇ ತಮಗೆ ಕಿಂಚಿತ್ತಾದರೂ ಮಾನ-ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಿ. ಸ್ವತಃ ರಾಜ್ಯದ ಉಚ್ಛ ನ್ಯಾಯಾಲಯವೇ ತಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವಾಗ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ತಮಗೆ ಅರ್ಹತೆ ಇಲ್ಲ ಎಂದು ಅವರು ಗುಡುಗಿದ್ದಾರೆ.

RELATED ARTICLES

Latest News