Thursday, August 7, 2025
Homeರಾಜಕೀಯ | Politics"ಸಿದ್ದರಾಮಯ್ಯನವರೇ, ಈ ನವರಂಗಿ ಆಟ ನಿಲ್ಲಿಸಿ, ರಾಜೀನಾಮೆ ನೀಡಿ ಕರ್ನಾಟಕವನ್ನು ಉಳಿಸಿ" : ಆರ್‌.ಅಶೋಕ್‌

“ಸಿದ್ದರಾಮಯ್ಯನವರೇ, ಈ ನವರಂಗಿ ಆಟ ನಿಲ್ಲಿಸಿ, ರಾಜೀನಾಮೆ ನೀಡಿ ಕರ್ನಾಟಕವನ್ನು ಉಳಿಸಿ” : ಆರ್‌.ಅಶೋಕ್‌

R Ashok attack on CM Siddaramaiah over KSRTC Strike

ಬೆಂಗಳೂರು,ಆ.5– ಅಧಿಕಾರ ಇದ್ದಾಗ ನವರಂಗಿ ಆಟ. ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಸಾಕು ಮಾಡಿ ಈ ನಾಟಕ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ಕನ್ನಡಿಗರನ್ನು ನೆಮದಿಯಾಗಿರಲು ಬಿಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಖ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌ ಅವರು, ಸಿಎಂ ಸಿದ್ದರಾಮಯ್ಯನವರೇ, ಅಧಿಕಾರ ಇದ್ದಾಗ ಹಗಲುವೇಷ ವಿರೋಧ ಪಕ್ಷದಲ್ಲಿದ್ದಾಗ ರೋಷಾವೇಶ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ನಿಮ್ಮ ದಿವಾಳಿತನಕ್ಕೆ ಸಾರಿಗೆ ನೌಕರರು ಎಷ್ಟು ದಿನ ನಷ್ಟ ಅನುಭವಿಸಬೇಕು? ನಿಮ ದುರಾಡಳಿತಕ್ಕೆ ಜನಸಾಮಾನ್ಯರು ಏಕೆ ದಿನನಿತ್ಯ ಪರದಾಡಬೇಕು? ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗದುಕೊಂಡಿದ್ದಾರೆ.

ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ನು ಯಾವ್ಯಾವ ರೀತಿ ಪರದಾಡಬೇಕು?, ಇನ್ನೆಷ್ಟು ಕಷ್ಟ ಅನುಭವಿಸಬೇಕು. ಬಸ್ಸಿಲ್ಲ..ಬಸ್ಸಿಲ್ಲ, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ. ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ. ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ. ಇದು ಬಹುಪಾಲು ಕನ್ನಡಿಗರ ಇಂದಿನ ಬವಣೆ ಎಂದು ವಿವರಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿ ಮಾಡಿ ಪಾಪರ್‌ ಆಗಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ, ಗೋಳಾಟ, ತೊಳಲಾಟ! ಸಿಎಂ ಸಿದ್ದರಾಮಯ್ಯನವರೇ, ನಿಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ. ಸಾರಿಗೆ ನೌಕರರ ಹಿಂಬಾಕಿ ಕೊಡಲು ದುಡ್ಡಿಲ್ಲ. ನೌಕರರ ವೇತನ ಹೆಚ್ಚಳ ಮಾಡಲು ದುಡ್ಡಿಲ್ಲ. ಹೊಸ ಬಸ್‌‍ ಖರೀದಿಗೆ ದುಡ್ಡಿಲ್ಲ. ಹಳೆ ಬಸ್‌‍ಗಳ ರಿಪೇರಿಗೆ ದುಡ್ಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯನವರೇ, ದಯವಿಟ್ಟು ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ಕನ್ನಡಿಗರಿಗೆ ನೆಮದಿಯ ಜೀವನ ಮಾಡಲು ಬಿಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

RELATED ARTICLES

Latest News