Sunday, October 6, 2024
Homeರಾಜಕೀಯ | Politicsಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ

R. Ashok demands resignation of CM Siddaramaiah

ಬೆಂಗಳೂರು, ಸೆ.24– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ರಾಜ್ಯಪಾಲರ ನಿರ್ಧಾರನ್ನ್ನು ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನು , ರಾಜಭವನವನ್ನು ನಿಂದಿಸುತ್ತಾ ಬಂದಿದ್ದರು. ಹೈಕೋರ್ಟ್ ನೀಡಿರುವ ಈ ತೀರ್ಪು ಇಡೀ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನು ನಿಂದಿಸುವುದನ್ನು ಬಿಟ್ಟು, ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Latest News