Sunday, May 5, 2024
Homeಇದೀಗ ಬಂದ ಸುದ್ದಿಮಾಜಿ ಸಿಎಂ ಬೊಮ್ಮಾಯಿ ಮನೆಗೆ ಅಶೋಕ್ ಭೇಟಿ

ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಅಶೋಕ್ ಭೇಟಿ

ಬೆಂಗಳೂರು,ನ.18- ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅಶೋಕ್ ಅವರು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು.

ಆರ್.ಟಿ.ನಗರದ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೊಮ್ಮಾಯಿ ಮತ್ತು ಅಶೋಕ್ ಪಕ್ಷದ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಕಾಲ ಪಕ್ಷದ ಸಂಘಟನೆ, ಬೆಳಗಾವಿ ಅವೇಶದಲ್ಲಿ ನಮ್ಮ ನಿಲುವು ಲೊಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ. ಇನ್ನರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ ನಡೆಸುವುದಗಿ ಹೇಳಿದರು.

ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್

ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೊಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಠಿಕಾಣಿ ಹೂಡಿರುವುದು. ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ ಮಾಡುತ್ತಿರುವುದು. ಟ್ರಾನ್ಸ್ ಫರ್ ದಂಧೆಯಲ್ಲಿ ತೊಡಗಿದ್ದು 60% ಪರ್ಸೆಂಟ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ.
ಶಾಸಕರಿಗೆ ಅನುದಾನ ನೀಡುತ್ತಿಲ್ಲ ಅವರು ಜನರ ಬಳಿ ಹೋಗುತ್ತಿಲ್ಲ. ಫ್ರಿ ಹೆಸರಿನಲ್ಲಿ ಹಣ ನೀಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ಆ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆ ಗೆ ಹೋಗುತ್ತಿದೆ ಎಂದರು.

ಅವರ ಸರ್ಕಾರವನ್ನು ಕೆಡವೊಕೆ ನಾನ್ಯಾರು ಅವರ್ಯಾರು ಮುಖ್ಯವಲ್ಲ. ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೊಯಿತು ಎಂದು ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ. ನಾವ್ಯಾಕೆ ಬೀಳಿಸೋಣ ಎಂದು ಪ್ರಶ್ನಿಸಿದರು.

ಇಲ್ಲ ಅಂದರೆ ಪರಮೇಶ್ವರ್ ತಮ್ಮ ಮನೆಯಲ್ಲಿ ಯಾಕೆ ಸಭೆ ಮಾಡಿದರು. ಪಕ್ಕದ ಮನೆಯಲ್ಲಿರುವ ಡಿಕೆಶಿ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ. ಜಮೀರ್ ಹೇಳಿಕೆ ಕುರಿತು ಅವೇಶನದಲ್ಲಿ ಮಾತನಾಡುತ್ತೇವೆ. ಅವರದು ಸಂವಿಧಾನ ವಿರೋಧಿ ನಡೆ. ಅದನ್ನು ಖಂಡಿಸಿದ್ದೇವೆ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಹೈಕಮಾಂಡ್ ಸೂಚನೆ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಉತ್ತರದಕ್ಷಿಣ ಕರ್ನಾಟಕ ಎಂದಿಲ್ಲ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ. ಎಲ್ಲರೂ ಸೇರಿ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.

RELATED ARTICLES

Latest News