Friday, June 21, 2024
Homeರಾಜ್ಯಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ : ಆರ್‌.ಅಶೋಕ್‌ ಗಂಭೀರ ಆರೋಪ

ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ : ಆರ್‌.ಅಶೋಕ್‌ ಗಂಭೀರ ಆರೋಪ

ಬೆಂಗಳೂರು, ಮೇ 28- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಅವರ ಆತಹತ್ಯೆಗೆ ಪ್ರತಿಪಕ್ಷದ ನಾಯಕರ ಬಳಿ ಸಾಕ್ಷಿ ಇಲ್ಲವೇ, ದಾಖಲೆ ಇದೆ ಎಂದು ಕಾಂಗ್ರೆಸ್‌‍ ನಾಯಕರು ನಮನ್ನೇ ಕೇಳುತ್ತಿದ್ದರು. ಡೆತ್‌ನೋಟ್‌ನಲ್ಲಿ ಅನೇಕ ಅಂಶಗಳನ್ನು ಬರೆದಿಟ್ಟು ಚಂದ್ರಶೇಖರನ್‌ ಆತಹತ್ಯೆಗೆ ಶರಣಾಗಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಅವರು ಪ್ರಶ್ನಿಸಿದರು.

ರಾಜ್ಯಸರ್ಕಾರದ ವೈಫಲ್ಯಗಳನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಶೋಕ್‌, ಒಬ್ಬ ಅಧಿಕಾರಿ ಪತ್ರ ಬರೆದು ಆತಹತ್ಯೆ ಮಾಡಿಕೊಂಡಿದ್ದಾನೆ. 187 ಕೋಟಿ ಲೂಟಿ ಮಾಡಿದ್ದಾರೆ ಅದು ಚೆಕ್‌ನಲ್ಲಿಯೇ ಲೂಟಿಯಾಗಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಇದಕ್ಕಿಂತ ಸಾಕ್ಷಿ ಏನು ಬೇಕು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮಾಜಿ ಸಚಿವ ಕೆ.ಎಸ್‌‍.ಈಶ್ವರಪ್ಪ ಅವರ ಮೇಲೆ ಆರೋಪ ಕೇಳಿಬಂದಾಗ ನೈತಿಕ ಹೊಣೆ ಹೊತ್ತು ತಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಚಿವರೊಬ್ಬರ ಮೇಲೆ ಇದೇ ರೀತಿ ಆರೋಪ ಕೇಳಿಬಂದಿರುವುದರಿಂದ ಸಚಿವ ನಾಗೇಂದ್ರ ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿಯವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಸರ್ಕಾರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳೂ ನಡೆಯುತ್ತಿಲ್ಲ. ಲಂಚ ಕೊಟ್ಟರೆ ಮಾತ್ರ ಎಲ್ಲವೂ ಸರಾಗವಾಗಿ ನಡೆಯುತ್ತವೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತದೆ. ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಕಿಲೋಮೀಟರ್‌ ರಸ್ತೆಗೆ ಡಾಂಬರು ಹಾಕಿಲ್ಲ, ಗುಂಡಿಗಳನ್ನು ಮುಚ್ಚಲು ಇವರ ಹಣೆಬರಹಕ್ಕೆ ಸಾಧ್ಯವಾಗಿಲ್ಲ, ಕರ್ನಾಟಕ ಮಾದರಿ ಇದೇನಾ? ಎಂದು ಪ್ರಶ್ನಿಸಿದರು.

ನಾವು ಏನಾದರೂ ಆರೋಪ ಮಾಡಿದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಮ ಬ್ರದರ್‌ರ‍ಸ ಎಂದು ವ್ಯಂಗ್ಯವಾಡುತ್ತಾರೆ. ಈಗ ಬೆಂಗಳೂರನ್ನು ಹಾಳು ಮಾಡುತ್ತಿರುವುದು ಇದೇ ಬ್ರದರ್‌ರ‍ಸ ಅಕ್ಕಪಕ್ಕ ಇರುವವರು. ಬ್ರಾಂಡ್‌ ಬೆಂಗಳೂರು ಈಗ ಗಬ್ಬೆದ್ದು ನಾರುವ ಸ್ಥಿತಿಗೆ ಬಂದಿದೆ ಎಂದು ಹರಿಹಾಯ್ದರು.

ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಬೆಂಗಳೂರು ಇರಲಿ, ಕರ್ನಾಟಕದಲ್ಲೂ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಐದು ಗ್ಯಾರಂಟಿ ಕೊಟ್ಟಿದ್ದೇವೆಂದು ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಐಟಿಬಿಟಿ ಮೂಲಕ ಬೆಂಗಳೂರು ಇಡೀ ವಿಶ್ವಕ್ಕೇ ಮಾದರಿಯಾಗಿತ್ತು. ಇಂದು ಅದೇ ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳಿಗೆ ಬಿದ್ದು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಂದು ಗುಂಡಿಯನ್ನೂ ಮುಚ್ಚಲು ಆಗದ ಸರ್ಕಾರ ಕರ್ನಾಟಕ ಮಾದರಿ ಬಗ್ಗೆ ಮಾತನಾಡುತ್ತಿರುವುದು ಐತಿಹಾಸಿಕ ವ್ಯಂಗ್ಯ ಎಂದು ಕುಹಕವಾಡಿದರು.

ಸರ್ಕಾರದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಗುತ್ತಿಗೆದಾರರು ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಅವರ ರಕ್ತವನ್ನು ಹೀರುವ ಕೆಲಸ ಸರ್ಕಾರವೇ ಮಾಡುತ್ತಿದೆ. ಕಾಮಗಾರಿಗಳಿಗೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಮಲಗಿರುವ ಸರ್ಕಾರವನ್ನು ಎಬ್ಬಿಸುವ ಕೆಲಸ ಬಿಜೆಪಿ ಮಾಡಲಿದೆ ಎಂದರು.

ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡದಿರುವುದೇ ಲೇಸು. ಪ್ರತಿ ಸ್ಟೇಷನ್‌ಗಳಿಗೂ ಇಂತಿಷ್ಟು ಮಾಮೂಲಿ ಕೊಡಬೇಕೆಂದು ನಿಗದಿಪಡಿಸಲಾಗಿದೆ. ಪೊಲೀಸರು ಎಲ್ಲೆಂದರಲ್ಲಿ ವಸೂಲಿ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಹೆಣ್ಣು ಮಕ್ಕಳು ಮನೆಯಿಂದ ಹೊರಹೋದರೆ ಸುರಕ್ಷಿತವಾಗಿ ವಾಪಸ್‌‍ ಬರುತ್ತೇವೆ ಎಂಬ ಖಾತರಿ ಇಲ್ಲ. ಮುಂದಿನ ದಿನಗಳಲ್ಲಿ ನಾವು ಸರ್ಕಾರದ ವಿರುದ್ಧ ಮತ್ತಷ್ಟು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.
ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೆಸ್‌‍ ಸರ್ಕಾರ ಇಲ್ಲಿನ ಸಮಸ್ಯೆಗಳನ್ನು ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದೆ. ಸಾಲದ್ದಕ್ಕೆ ಸುಪ್ರೀಂಕೋರ್ಟ್‌ಗೂ ಹೋಗಿದ್ದರು.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ ಎಷ್ಟೆಷ್ಟು ಅನುದಾನ ಕೊಟ್ಟಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ, ಕುಡಿಯುವ ನೀರಿಗೂ ತೊಂದರೆಯಾಗಿದೆ, ರಸ್ತೆಗಳು ಗುಂಡಿಮಯವಾಗಿವೆ, ಕಾಂಗ್ರೆಸ್‌‍ ಶಾಸಕರಿಗೆ ಮಾತ್ರ ಅನುದಾನ ಸಿಗುತ್ತದೆ, ನಮ ಕ್ಷೇತ್ರಕ್ಕೆ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಕಿಡಿಕಾರಿದರು.ಪ್ರತಿಭಟನೆಯಲ್ಲಿ ಶಾಸಕರಾದ ಎಸ್‌‍.ಆರ್‌.ವಿಶ್ವನಾಥ್‌, ಭೈರತಿ ಬಸವರಾಜು, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.

RELATED ARTICLES

Latest News