Friday, November 22, 2024
Homeರಾಜ್ಯಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ತೆಲಂಗಾಣ ಚುನಾವಣೆಯಲ್ಲಿ ಬಳಕೆ : ಆರ್.ಅಶೋಕ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ತೆಲಂಗಾಣ ಚುನಾವಣೆಯಲ್ಲಿ ಬಳಕೆ : ಆರ್.ಅಶೋಕ್

R Ashok

ಬೆಂಗಳೂರು,ಸೆ.17– ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೋ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಗುಳೇ ಹೋಯಿತೋ? ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದರು.

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್ಟ್ ಮಾಡಿರುವ ಅವರು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರೇ ತಮ ಚೀಫ್‌ ್ಢಃಟಟಚಿಛ್ಟಿ ಮೂಲಕ ಫ್ಯಾಕ್ಟ್ ಚೆಕ್ ಮಾಡಿಸಿ ಕಲ್ಯಾಣ ಕರ್ನಾಟಕದ ಜನತೆಗೆ ವಾಸ್ತವಾಂಶ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿ ಮಾಡಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕಾಂಗ್ರೆಸ್, ಸರ್ಕಾರ ಕಲ್ಯಾಣ ಕರ್ನಾಟಕದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತಾ? ನಿಮಗೆ ಕಿಂಚಿತ್ತಾದರೂ ಆತಸಾಕ್ಷಿ ಇದ್ದರೆ ಸಂಪುಟ ಸಭೆ ಮಾಡುವ ಮುನ್ನ ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ರೂಪಾಯಿ ನೀಡುವುದಾಗಿ ತಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರಲ್ಲ, ಕಳೆದ ಎರಡು ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒಟ್ಟು ಎಷ್ಟು ಹಣ ಮೀಸಲಿಟ್ಟಿದ್ದೀರಿ? ಅದರಲ್ಲಿ ಬಿಡುಗಡೆಯಾದ ಅನುದಾನ ಎಷ್ಟು? ಖರ್ಚಾಗಿದ್ದು ಎಷ್ಟು? ಎಂದು ಪ್ರಶ್ನೆ ಮಾಡಿದ್ದಾರೆ.

ಬಳ್ಳಾರಿಯಲ್ಲಿ 5,000 ಕೋಟಿ ರೂಪಾಯಿ ಮೊತ್ತದ ಅಪೇರಲ್ ಪಾರ್ಕ್ ಸ್ಥಾಪಿಸುವ ಭರವಸೆ ಏನಾಯ್ತು?
ತಮ್ಮ ಪ್ರಚಾರ ಭಾಷಣದಲ್ಲಿ ಬಳ್ಳಾರಿಯನ್ನ ಜೀನ್ಸ್ ರಾಜಧಾನಿ ಮಾಡುವ ಭರವಸೆ ಏನಾಯ್ತು? ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯುಸಿ ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದರಲ್ಲಾ? ಅದರಲ್ಲಿ ಒಂದಾದರೂ ಸ್ಥಾಪನೆಯಾಗಿದೆಯಾ? ಕಲ್ಯಾಣ ಕರ್ನಾಟಕದ ಪ್ರತಿ ಹೋಬಳಿಯಲ್ಲಿ ಒಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆ ಸ್ಥಾಪಿಸುವ ಭರವಸೆ ನೀಡಿದ್ದರಲ್ಲ, ಕನಿಷ್ಠ ಪಕ್ಷ ಒಂದಾದರೂ ಸ್ಥಾಪನೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಎರಡು ವರ್ಷದೊಳಗೆ ಕಲ್ಯಾಣ ಕರ್ನಾಟಕದ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗು ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ನೇಮಕಾತಿ ಮಾಡುತ್ತೇವೆ ಎನ್ನುವ ಭರವಸೆ ಈಡೇರುವುದು ಯಾವಾಗ? ಕಳೆದ 15 ತಿಂಗಳಲ್ಲಿ ಎಷ್ಟು ಶಿಕ್ಷಕರ ನೇಮಕಾತಿ ಆಗಿದೆ? ಎಷ್ಟು ಶಾಲಾ ಕೊಠಡಿಗಳ ನಿರ್ಮಾಣ ಆಗಿದೆ ಎಂದು ಪ್ರಶ್ನೆ ಹಾಕಿದ್ದಾರೆ.

ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಭರವಸೆ ಈಡೇರಿದೆಯೇ? ಎಂದು ಎಂದು ಪ್ರಶ್ನೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕವನ್ನ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ನಾಮಕಾವಸ್ತೆ ಸಂಪುಟ ಸಭೆ ಮಾಡುವ ಮೊದಲು ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Latest News