ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹೆಮ್ಮೆಯ ವಿಷಯ : ಆರ್.ಅಶೋಕ್

Social Share

ಬೆಂಗಳೂರು,ಅ.31- ಪುನೀತ್ ನಮ್ಮನಗಲಿ ಒಂದು ವರ್ಷವಾದರೂ ಅವರ ಮೇಲಿನ ಅಭಿಮಾನ ಮಾತ್ರ ಹೆಚ್ಚಾಗುತ್ತಲೆ ಇದೆ. ಅವರ ಸಮಾಗೆ ಸಾವಿರಾರು ಜನ ಬಂದು ಹೋಗುತ್ತಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಪೂರ್ವ ತಯಾರಿಗಳ ಕುರಿತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರೊಂದಿಗೆ ಇಂದು ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ನಾಳೆ ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯುತ್ತಿದ್ದು, ಪುನೀತ್ ರಾಜ್ಕುಮಾರ್ಗೆ ಮರಣೋತ್ತರವಾಗಿ ನೀಡಲಾಗುತ್ತಿರುವ ಕರ್ನಾಟಕದ ಪ್ರತಿಷ್ಠಿತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪತ್ನಿ ಅಶ್ವಿನಿ ಪುನೀತ್ರಾಜ್ಕುಮಾರ್ ಅವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿಧಾನಸೌಧದ ಮುಂಭಾ ಗದಲ್ಲಿ ಸ್ವೀಕರಿಸಲು ಅವರ ಕುಟುಂಬ ಬಯಸಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದ ರಸ್ತೆಯನ್ನು ಬ್ಲಾಕ್ ಮಾಡಲಾಗುತ್ತಿದೆ. 25 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಕಾರ್ಯಕ್ರಮಕ್ಕೆ ನಟ ರಜನೀಕಾಂತ್, ಜೂನಿಯರ್ ಎನ್ಟಿಆರ್ ಆಗಮಿಸುತ್ತಿದ್ದಾರೆ ಎಂದು ಹೇಳಿದರು. ಗಾಯಕ ವಿಜಯ್ ಪ್ರಕಾಶ್ ಅವರಿಂದ ಗಾಯನ ಕಾರ್ಯಕ್ರಮ ವಿದ್ದು, ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗಿದೆ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಾಶಸ್ವಿಗೊಳಿಸಬೇಕೆಂದು ಕೋರಿದರು.

ಕಾರ್ಯಕ್ರಮಕ್ಕೆ ಆಗಮಿಸಲು ಬೆಂಗಳೂರಿನ ಸಾರ್ವಜನಿಕರಿಗೆ ಹಾಗೂ ಚಲನಚಿತ್ರ ನಟರು, ಪ್ರಮುಖ ರಂಗದವರಿಗೆ ಪಾಸ್ ನೀಡಲಾಗುತ್ತಿದೆ ಎಂದರು. ಸಚಿವ ಸುನೀಲ್ಕುಮಾರ್ ಮಾತನಾಡಿ, ನಾಳೆ ಸಂಜೆ 5 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. 10ಕ್ಕೂ ಹೆಚ್ಚು ಎಲ್ಇಡಿ ಸ್ಕ್ರೀನ್ಗಳನ್ನು ಹಾಕಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿ ಪ್ರಶಸ್ತಿಯೇ ಸಾಧಕರನ್ನು ಹುಡುಕಿಕೊಂಡು ಹೋಗಿದೆ. ಪ್ರಶಸ್ತಿ ಘೋಷಣೆಯಾದ ಬಳಿಕ ಅನೇಕರ ಫೋಟೋ ಕೇಳಲಾಗಿತ್ತು. ಅನೇಕರ ಬಳಿ ಫೋಟೋನೇ ಇರಲಿಲ್ಲ. ಎಲೆಮರೆಯ ಕಾಯಿಗಳಂತೆ ಮೌನವಾಗಿರುವ ಸಾಧಕರನ್ನು ಹೊರ ತರುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.

ಹೂವಿನ ಹಡಗಲಿಯ ಪೌರಕಾರ್ಮಿಕ, ದೈವ ನರ್ತನ ಮಾಡುವರನ್ನ, ಅಂಗವಿಕಲ ಕ್ರೀಡಾಪಟು ಹೀಗೆ ಅನೇಕರನ್ನು ಗುರುತಿಸಲಾಗಿದೆ. ಇವರೆಲ್ಲರಿಗೂ ನಾಳಿನ ಕಾರ್ಯಕ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುನೀಲ್ಕುಮಾರ್ ತಿಳಿಸಿದರು.

Articles You Might Like

Share This Article