Friday, November 22, 2024
Homeರಾಜ್ಯನಾಗಮಂಗಲ ಕೋಮುಗಲಭೆ : ಜಿಹಾದಿಗಳ ಬಾಲ ಕತ್ತರಿಸುವಂತೆ ಆರ್‌.ಅಶೋಕ್‌ ಆಕ್ರೋಶ

ನಾಗಮಂಗಲ ಕೋಮುಗಲಭೆ : ಜಿಹಾದಿಗಳ ಬಾಲ ಕತ್ತರಿಸುವಂತೆ ಆರ್‌.ಅಶೋಕ್‌ ಆಕ್ರೋಶ

R Ashok on Nagamangala Violence

ಬೆಂಗಳೂರು,ಸೆ.12- ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಗೆ ಕೆಲವು ಮತೀಯ ಶಕ್ತೀಗಳೇ ಕಾರಣವಾಗಿದೆ. ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ಇಂತಹ ಮತಾಂತ ಶಕ್ತೀಗಳ ವಿರುದ್ದ ನಿರ್ದಾಕ್ಷ್ಯಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ರವರಿಗೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್‌‍ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್‌ ಬ್ಯಾಂಕ್‌ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್‌‍ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್‌ ಮನಸ್ಥಿತಿಗೆ ಕಾಂಗ್ರೆಸ್‌‍ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ ಎಂದು ಆತಂಕ ಹೊರಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್‌‍ ಆಡಳಿತದಲ್ಲಿ ರಾಜ್ಯದಲ್ಲಿ ಕಣರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್‌‍ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಳಿ ನಡೆಸಿದ್ದಾರೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟೋಲ್‌ ಬಾಂಬ್‌ ಸ್ಫೋಟಿಸುವುದು, ತಲ್ವಾರ್‌ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಆಶೋಕ್‌ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

RELATED ARTICLES

Latest News