ಸೋಮಶೇಖರ್ ಉಚ್ಚಾಟನೆ ವರಿಷ್ಠರಿಗೆ ಬಿಟ್ಟ ವಿಚಾರ : ಆರ್.ಅಶೋಕ್

ಬೆಂಗಳೂರು,ಏ.5- ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವುದು ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಟಿ.ಸೋಮಶೇಖರ್ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲೂ ಅವರ ಕಾಂಗ್ರೆಸ್ ಅಭ್ಯರ್ಥಿಗೆ ಅವರು ಮತ ಚಲಾಯಿಸಿದ್ದರು. ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡುವ ಕುರಿತು ವರಿಷ್ಠರೇ ತೀರ್ಮಾನಿಸುತ್ತಾರೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜೀವ್ಗೌಡ ಪರವಾಗಿ … Continue reading ಸೋಮಶೇಖರ್ ಉಚ್ಚಾಟನೆ ವರಿಷ್ಠರಿಗೆ ಬಿಟ್ಟ ವಿಚಾರ : ಆರ್.ಅಶೋಕ್