Thursday, July 31, 2025
Homeರಾಜ್ಯರಾಹುಲ್‌ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ..? : ಆರ್‌.ಅಶೋಕ್‌

ರಾಹುಲ್‌ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ..? : ಆರ್‌.ಅಶೋಕ್‌

R Ashok Question Rahul Gandhi

ಬೆಂಗಳೂರು,ಜು.30- ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನೆ ಮಾಡಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಹುಲ್‌ ಗಾಂಧಿ, ಕಾಂಗ್ರೆಸ್‌‍ ಹಾಗೂ ಆಡಳಿತಾರೂಢ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತಹತ್ಯೆಗೆ ಶರಣಾದಾಗ ಬರಲಿಲ್ಲ. ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೈಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್‌ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ! ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್‌‍ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್‌ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್‌ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಎಂದು ಮರು ಪ್ರಶ್ನೆ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ, ಮೈಕ್ರೋ ಫೈನಾನ್‌್ಸ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತಹತ್ಯೆ ಮಾಡಿಕೊಂಡಾಗ ಬರಲಿಲ್ಲ, ಐಪಿಎಲ್‌ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ.

ಈಗ ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ, ನಿಮ ಕಾಂಗ್ರೆಸ್‌‍ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ರಿಯಲ್‌ ಎಸ್ಟೇಟ್‌ ಕುಳಗಳ ಕಪಿಮುಷ್ಠಿಗೆ ಕೊಡಲು ಹೊರಟಿದೆ ಕಾಂಗ್ರೆಸ್‌‍ ಸರ್ಕಾರ! ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 2024ರ (ಕೆಟಿಸಿಡಿಎ)ಯಡಿ ಇರುವ ಎಲ್ಲ ಕೆರೆಗಳಿಗೆ 30 ಮೀಟರ್‌ ಬಫರ್‌ ಝೋನ್‌ ಇರಬೇಕು ಎಂಬ ನಿಯಮಕ್ಕೆ ತಿದ್ದುಪಡಿ ತಂದು ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡಲು ಹೊರಟಿರುವ ಕಾಂಗ್ರೆಸ್‌‍ ಸರ್ಕಾರ ರಿಯಲ್‌ ಎಸ್ಟೇಟ್‌ ಮಾಫಿಯಾಗೆ ಶರಣಾಗಿ ಬೆಂಗಳೂರು ನಗರವನ್ನು ಸರ್ವನಾಶ ಮಾಡಲು ಪಣ ತೊಟ್ಟಂತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ತಿದ್ದುಪಡಿ ಜಾರಿಯಾದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿರುವ 172 ಕೆರೆಗಳ ಬಫರ್‌ ಝೋನ್‌ 30 ಮೀಟರ್‌ಗಿಂತ ಕಡಿಮೆಯಾಗಲಿದ್ದು, ಪ್ರಕೃತಿ ವಿಕೋಪಗಳಿಗೆ ದಾರಿ ಮಾಡಿಕೊಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದುಕಡೆ ಸುಪ್ರೀಂಕೋರ್ಟ್‌, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಹೈಕೋರ್ಟ್‌ ಹಲವು ಬಾರಿ ಆದೇಶ ನೀಡಿದ್ದರೂ ಕೆರೆಗಳ ಒತ್ತುವರಿ ತೆರವು ಮಾಡಿಲ್ಲ. ಬಫರ್‌ ಝೋನ್‌ ಅಂತೂ ಇಲ್ಲವೇ ಇಲ್ಲ, ಈಗ ಕೆರೆಗಳ ಸಂರಕ್ಷಿತ ವಲಯವನ್ನು ಕಡಿಮೆ ಮಾಡುವ ಕಾಂಗ್ರೆಸ್‌‍ ಸರ್ಕಾರದ ತೀರ್ಮಾನ ಬ್ರ್ಯಾಂಡ್‌ ಬೆಂಗಳೂರಿನ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಉಲ್ಲೇಖಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ಬ್ರ್ಯಾಂಡ್‌ ಬೆಂಗಳೂರು ಕಟ್ಟುತ್ತೇನೆ ಎಂದು ಬೆಂಗಳೂರಿನ ಕೆರೆಗಳನ್ನು ಭೂ ಮಾಫಿಯಾಗೆ ಧಾರೆ ಎರೆದು ಕೊಡುತ್ತಿದ್ದೀರಲ್ಲ ಸ್ವಾಮಿ, ನಿಮ ಭೂದಾಹಕ್ಕೆ ಇನ್ನೆಷ್ಟು ಕರೆಗಳು ಬಲಿಯಾಗಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News