Tuesday, September 16, 2025
Homeರಾಜ್ಯಸೋಮಶೇಖರ್ ವಿರುದ್ಧ ಕಾನೂನ ಕ್ರಮ: ಆರ್.ಅಶೋಕ್

ಸೋಮಶೇಖರ್ ವಿರುದ್ಧ ಕಾನೂನ ಕ್ರಮ: ಆರ್.ಅಶೋಕ್

ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಕಾನೂನ ಕ್ರಮ ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಿನ್ನೆ ಕೂಡ ಎಸ್.ಟಿ.ಸೋಮಶೇಖರ್ ತಮಗೆ ಕರೆ ಮಾಡಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದರು.

ಈಗ ಅಡ್ಡಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಏನು ಮಾಡುತ್ತಾರೆ ಗೊತ್ತಿಲ್ಲ. ಕಳೆದ 4 ತಿಂಗಳಿನಿಂದ ಈ ಇಬ್ಬರು ಸಿಎಂ ಹಗೂ ಡಿಸಿಎಂ ಜೊತೆ ತಿರುಗಾಡುತಿದ್ದರು. ವಿಧಾನಸಭಾ ಚುನಾವಣೆ ನಡೆದು 9 ತಿಂಗಳಾಗಿಲ್ಲ. ಆಗಲೇ ಪಕ್ಷಾಂತರ ಮಾಡುವುದನ್ನು ಜನ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಉಚ್ಚಾಟನೆ ಸಾಧ್ಯತೆ!

ಶಿವರಾಮ ಹೆಬ್ಬಾರ್ ಇಂದು ಬೆಳಗ್ಗೆ ಕೂಡ ತಮ್ಮ ಸಂಪರ್ಕದಲ್ಲಿದ್ದು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದಿದ್ದರು. ಈಗ ಅವರ ನಡವಳಿಕೆ ಪ್ರಶ್ನಾರ್ಹವಾಗಿದೆ ಎಂದರು. ಎಸ್.ಟಿ.ಸೋಮಶೇಖರ್ ಬಿಜೆಪಿಯಲ್ಲಿ ಸಚಿವರಾಗಿದ್ದರು. ಪ್ರಭಾವಿ ಜಿಲ್ಲೆಯಲ್ಲಿ ಮೈಸೂರಿನ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈಗ ಅಡ್ಡ ಮತದಾನ ಮಾಡಿ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡ್ಡಮತದಾನ, ಪಕ್ಷ ದ್ರೋಹದ ವಿರುದ್ಧ ಆಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ವಕೀಲ ವಿವೇಕ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಕಾನೂನು ತಜ್ಞರ ಜೊತೆ ಕೂಡ ಸಮಲೋಚನೆ ನಡೆಯುತ್ತಿದೆ ಸಾಧ್ಯವಿರುವ ಎಲ್ಲಾ ಕಾನುನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಈ ಇಬ್ಬರೂ ಶಾಸಕರಿಗೂ ವ್ಹಿಪ್ ಜಾರಿ ಮಾಡಲಾಗಿತ್ತು. ಅವರ ಕಚೇರಿ ಹಾಗೂ ಮನೆಗಳಿಗೆ ವ್ಹಿಪ್ ಕಳುಹಿಸುವ ಜೊತೆಗೆ ಆಪ್ತ ಸಹಾಯಕರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗಿದೆ. ಪಕ್ಷದ ಚಿಹ್ನೆಯಡಿ ಗೆದ್ದು ದ್ರೋಹ ಮಾಡಿರುವುದನ್ನು ಮತದಾರರು ಕ್ಷಮಿಸಲ್ಲ ಎಂದು ಪುನರುಚ್ಚರಿಸಿದರು.

ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ

ಎನ್‍ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್‍ನ ಕುಪೇಂದ್ರರೆಡ್ಡಿ ಸೋಲು ಯಾವುದೇ ಮುಜುಗರ ಉಂಟುಮಾಡಿಲ್ಲ. ಪ್ರಯೋಗಾತ್ಮಕವಾಗಿ ಅವರನ್ನು ಕಣಕ್ಕಿಳಿಸಲಾಗಿತ್ತು. ಹೀಗಾಗಿ ಬಿಜೆಪಿ ಅಥವಾ ಜೆಡಿಎಸ್‍ನ ಸೋಲು ಎಂದು ಪರಿಗಣಿಸುವ ಅಗತ್ಯವಿಲ್ಲ ಎಂದರು.

RELATED ARTICLES

Latest News