Saturday, September 14, 2024
Homeರಾಜಕೀಯ | Politics"ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ" : ಸಿದ್ದರಾಮಯ್ಯನವರೇ ಹುಷಾರು

“ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ” : ಸಿದ್ದರಾಮಯ್ಯನವರೇ ಹುಷಾರು

ಬೆಂಗಳೂರು,ಆ.21- ದುಷ್ಮನ್ ಕಹಾ ಹೈ ಅಂದರೆ, ಕಾಂಗ್ರೆಸ್‌‍ ಪಾರ್ಟಿ ತುಂಬಾ ಹೈ ಎನ್ನುವ ಮೂಲಕ ನಿಮ ಪಕ್ಷದಲ್ಲೇ ನಿಮಗೆ ಹಿತಶತ್ರುಗಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಸಿದ್ದಾರೆ.

ಕಾಂಗ್ರೆಸ್‌‍ನಲ್ಲಿ ಮುಂದಿನ ಸಿಎಂ ಬಗ್ಗೆ ಕೆಲವರಿಂದ ಒಳ ಲೆಕ್ಕಾಚಾರ ಇದೆ ಎಂಬರ್ಥದಲ್ಲಿ ಎಕ್‌್ಸನಲ್ಲಿ ಪೋಸ್ಟ್‌ ಹಾಕಿರುವ ಅಶೋಕ್‌, ಸಿಎಂ ಸಿದ್ದರಾಮಯ್ಯ ಅವರಿಗೆ ನಮ ಸಂಪೂರ್ಣ ಬೆಂಬಲ ಇದೆ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್‌‍ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಿಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

RELATED ARTICLES

Latest News