Wednesday, May 1, 2024
Homeರಾಜಕೀಯತಾಕತ್ತಿದ್ದರೆ 5 ವರ್ಷ ನಾನೇ ಎಂದು ಹೇಳಿ : ಸಿದ್ದುಗೆ ಅಶೋಕ್ ಚಾಲೆಂಜ್

ತಾಕತ್ತಿದ್ದರೆ 5 ವರ್ಷ ನಾನೇ ಎಂದು ಹೇಳಿ : ಸಿದ್ದುಗೆ ಅಶೋಕ್ ಚಾಲೆಂಜ್

ಬೆಂಗಳೂರು,ಮಾ.20 –ತಾಕತ್ತಿದ್ದರೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಒಮ್ಮೆ ಹೇಳಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರೇ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಒಮ್ಮೆ ಹೇಳಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ನಿಮಗೆ ಖಂಡಿತ ಹೇಳಲು ಆಗುವುದಿಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನಿಮ್ಮ ಬಗ್ಗೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರಾ ತಾವು? ಎಂದು ಪ್ರಶ್ನಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ ಎಕ್ಸ್‍ಪೈರಿ ಡೇಟ್ ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು ಎಂದು ವ್ಯಂಗ್ಯವಾಡಿದ್ದಾರೆ.

RELATED ARTICLES

Latest News