ಬೆಂಗಳೂರು : ಇಂದು ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಮಂಜುನಾಥ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಪಣ್ಣ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆಂಪಣ್ಣ ಅವರ ಆಪ್ತ ಬಳಗದಲ್ಲಿ ಇದ್ದಂತ ಮಂಜುನಾಥ್ ಅವರು ಎಲ್ಲಾ ಕೆಲಸ ಕಾರ್ಯಗಳಲ್ಲೂ ತೊಡಗಿಕೊಂಡು ಕುತ್ತಿಗೆದಾರರ ಪರವಾಗಿ ಸರ್ಕಾರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಹೀಗಾಗಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.