ಬೆಂಗಳೂರು, ಮೇ 27- ಸಚಿವ ಸ್ಥಾನ ಸಿಗದೇ ಇರುವುದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಮರಳಿರುವುದೇ ತಮಗೆ ಸಂತೋಷ ಎಂದು ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ಬಂದಿದ್ದೇನೆ. ನನಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ನನಗೆ ಯಾವುದೇ ಬೇಜಾರಿಲ್ಲ ಎಂದಿದ್ದಾರೆ.
ಸಂತಸ ಹಂಚಿಕೊಂಡ ಸಂಪುಟದ ನೂತನ ಸಚಿವರು
ಹಲವಾರು ವರ್ಷ ಸಚಿವ ಸ್ಥಾನ, ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ಅಧ್ಯಕ್ಷ ಸ್ಥಾನ ಸೇರಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಈ ಬಾರಿಯೂ ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಬೆನ್ನು ಹತ್ತಿರಲಿಲ್ಲ, ಲಾಬಿ ಮಾಡಲಿಲ್ಲ ಎಂದು ಹೇಳಿದರು.
#RVDeshapade, #CabinetExpansion,