ಬೆಂಗಳೂರು,ಡಿ.7- ರೇಸ್ ಬೆಟ್ಟಿಂಗ್ ಮತ್ತು ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ 1.53 ಲಕ್ಷ ರೂ. ಹಣ ಹಾಗೂ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನಪಾಳ್ಯ ಬಸ್ ನಿಲ್ದಾಣ ಹತ್ತಿರದ ಪೆಟ್ಟಿಗೆ ಅಂಗಡಿಯೊಂದರ ಮುಂಭಾಗ ಪುಟ್ಪಾತ್ ನಲ್ಲಿ ವ್ಯಕ್ತಿಯೊಬ್ಬ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದನು.
ಆತ ತನ್ನ ಮೊಬೈಲ್ನ ವಾಟ್ಸಾಪ್ ನಲ್ಲಿ ರೇಸ್ ಬೆಟ್ಟಿಂಗ್ ಆಡುವ ಪಂಟರುಗಳ ಬಿಎಸ್ಆರ್ ಫ್ರೆಂಡ್ಸ್ ಎಂಬ ಗ್ರೂಪ್ನ್ನು ತೆರೆದು ಆ ಗ್ರೂಪ್ ಮೂಲಕ ರೇಸ್ ಬೆಟ್ಟಿಂಗ್ ಜೂಜಾಟವಾಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿದೆ.
ವೋಟರ್ ಡೇಟಾ ಹಗರಣ : ಇಬ್ಬರು ಐಎಎಸ್ ಅಧಿಕಾರಿಗಳಿಗೆ ಮತ್ತೆ ಡ್ರಿಲ್
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ ರೇಸ್ ಬೆಟ್ಟಿಂಗ್ಗೆ ಸಂಬಂಧಿಸಿದ 1,01,650 ರೂ ನಗದು ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡು ಆರೋಪಿ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.
ಕ್ರಿಕೆಟ್ ಬೆಟ್ಟಿಂಗ್:
ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಐದನೇ ಹಂತ, ಎಸ್ಎಚ್ಐಜಿ, ಸಿ-5 ಅಪಾರ್ಟ್ಮೆಂಟ್ ಮುಂಭಾಗದ ಪುಟ್ಪಾತ್ನಲ್ಲಿ ವ್ಯಕ್ತಿಯೊಬ್ಬ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಈ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ 51.500 ರೂ. ಹಣ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಸಿದ್ರಾಮುಲ್ಲಾಖಾನ್ ನಾಮಕರಣಕ್ಕೆ ಬೇಸರವಿಲ್ಲ: ಸಿದ್ದರಾಮಯ್ಯ
ಆರೋಪಿಯ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿರುತ್ತದೆ. ಈ ಎರಡು ಕಾರ್ಯಾಚರಣೆಗಳನ್ನು ಕೇಂದ್ರ ಅಪರಾಧ ವಿಭಾಗದ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ನಡೆಸಿರುತ್ತಾರೆ.
race, cricket, betting, Two, arrested, CCB Police,