ನವದೆಹಲಿ,ಡಿ.14- ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ರಾಹುಲ್‍ಗಾಂಧಿ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ರಾಹುಲ್‍ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಘುರಾಮ್ ರಾಜನ್ ಅವರು ಕಾಣಿಸಿಕೊಂಡಿರುವುದು ಎಲ್ಲೇಡೆ ವೈರಲ್ ಅಗಿದೆ.
ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್‍ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಮೆರವಣಿಗೆಯಲ್ಲಿ ರಾಜನ್ ಮತ್ತು ಗಾಂಧಿ ಚರ್ಚೆ ನಡೆಸುತ್ತ ಸಾಗುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ಮಾಜಿ ಆರ್‍ಬಿಐ ಗವರ್ನರ್ ರಘುರಾಮ್ ರಾಜನ್ ಅವರು ರಾಹುಲ್ ಗಾಂಧಿ ಅವರೊಂದಿಗೆ ಕಾಣಿಸಿಕೊಂಡಿರುವುದು . ದ್ವೇಷದ ವಿರುದ್ಧ ದೇಶವನ್ನು ಒಗ್ಗೂಡಿಸಲು ಹೆಚ್ಚುತ್ತಿರುವ ಜನರ ಸಂಖ್ಯೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಭಾರತ-ಚೀನಾ ಗಡಿ ಸಂಘರ್ಷ ಕುರಿತು ಅಮೇರಿಕ ಪ್ರತಿಕ್ರಿಯೆ ಏನು ಗೊತ್ತೇ..?
ಮುಂದಿನ ವರ್ಷ ಗಣರಾಜ್ಯೋತ್ಸವದಂದು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿರುವ ಭಾರತ್ ಜೋಡೋ ಯಾತ್ರೆ ಈಗಾಗಲೇ ಹಲವಾರು ಮಂದಿಯನ್ನು ಸೇರ್ಪಡೆ ಮಾಡಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ.
ಬಿಎಂಟಿಸಿಯಲ್ಲಿ ಡ್ಯೂಟಿ-ರಜೆಗೆ ಲಂಚ : 8 ಭ್ರಷ್ಟ ಅಧಿಕಾರಿಗಳ ಅಮಾನತು
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್, ಸ್ವಯಂಘೋಷಿತ ದೇವಮಾನವ ನಾಮದೇವ್ ದಾಸ್ ತ್ಯಾಗಿ, ನಟಿ ಸ್ವರಾ ಭಾಸ್ಕರ್ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಮತ್ತಿತರರು ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
#RaghuramRajan, #joins, #RahulGandhi, #BharatJodoYatra,