Wednesday, December 4, 2024
Homeರಾಷ್ಟ್ರೀಯ | Nationalಮಧ್ಯಪ್ರದೇಶ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಕುಮಾರ್ ಸಿಂಗ್ ನೇಮಕ

ಮಧ್ಯಪ್ರದೇಶ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಕುಮಾರ್ ಸಿಂಗ್ ನೇಮಕ

ಭೋಪಾಲ್, ಡಿ 16 (ಪಿಟಿಐ) ಹಿರಿಯ ಐಎಎಸ್ ಅಧಿಕಾರಿ ರಾಘವೇಂದ್ರ ಕುಮಾರ್ ಸಿಂಗ್ ಅವರನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಶುಕ್ರವಾರ ತಡರಾತ್ರಿ ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ.

1994 ರ ಬ್ಯಾಚ್‍ನ ಐಎಎಸ್ ಅಧಿಕಾರಿ ಮನೀಶ್ ರಸ್ತೋಗಿ ಅವರನ್ನು ಬದಲಿಸಿ ಅವರ ಸ್ಥಾನಕ್ಕೆ 1997 ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಸಿಂಗ್ ಅವರನ್ನು ನೇಮಿಸಲಾಗಿದೆ. ರಸ್ತೋಗಿ ಅವರು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಈ ಹುದ್ದೆಗೆ ನೇಮಕಗೊಳ್ಳುವ ಮೊದಲು ಸಿಂಗ್ ಅವರು ಗಣಿಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ

ಉಜ್ಜಯಿನಿ ದಕ್ಷಿಣದ ಶಾಸಕ ಮೋಹನ್ ಯಾದವ್ ಅವರು ಡಿಸೆಂಬರ್ 13 ರಂದು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

RELATED ARTICLES

Latest News