ಬಾಲಿವುಡ್‌ಗೆ ಹಾರಿದ ರಾ’ಗಿಣಿ’

Social Share

ಈ ಹಿಂದೆ ಬಾಲಿವುಡ್ನಲ್ಲಿ ಹಾಡೊಂದಕ್ಕೆ ಹಾಟ್ ಆಗಿ ಕುಣಿದು ಬಂದಿದ್ದ ತುಪ್ಪದ ಬೆಡಗಿ ರಾಗಿಣಿ, ಈಗ ಸಂಪೂರ್ಣ ನಾಯಕಿಯಾಗಿ ಅಭಿನಯಿಸಿ, ಮೊದಲ ಹಂತದ ಶೂಟಿಂಗ್ಅನ್ನು ಲಂಡನ್ನಲ್ಲಿ ಮುಗಿಸಿಕೊಂಡು ಬಂದಿದ್ದಾರೆ. ಇತ್ತೀಚಿಗೆ ಈ ಖುಷಿಯನ್ನು ಹಂಚಿಕೊಳ್ಳಲು ಪತ್ರಿಕಾಗೋಷ್ಠಿಯನ್ನು ಕರೆದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಜರ್ನಿ ಆಗಿದೆ. ಕಳೆದ ವರ್ಷ ಹೆಚ್ಚಾಗಿ ಶೂಟಿಂಗ್ನಲ್ಲಿ ಬ್ಯುಸಿ ಇದ್ದೇ. ಈಗ ಹಿಂದಿ ಸಿನಿಮಾವೊಂದರಲ್ಲಿ ನಟಿಸು ತ್ತಿದ್ದು, ಮೊದಲ ಹಂತದ ಶೂಟಿಂಗ್ ಮುಗಿದಿದೆ.

ಇದೊಂದು ಹಾರರ್, ಥ್ರಿಲ್ಲರ್ ಚಿತ್ರವಾಗಿದ್ದು, ಯಶಸ್ವಿ ಸಿನಿಮಾಗಳ ನಿರ್ದೇಶಕ ಆಯುರ್ ಶರ್ಮಾ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಹೆಸರು ವಾಕ್ರೋ ಹೌಸ್. ಸಂಪೂರ್ಣ ಶೂಟಿಂಗ್ ಮುಗಿದ ಮೇಲೆ ತಂಡದೊಂದಿಗೆ ಮತ್ತೆ ಬರುತ್ತೇನೆ.

ನಾನು ಇದರಲ್ಲಿ ಲಂಡನ್ ಬೇಸ್ ಬುಕ್ ರೈಟರ್ ಪಾತ್ರ ಮಾಡುತ್ತಿದ್ದು, ಮೊದಲ ಹಂತದ ಶೂಟಿಂಗ್ ಲಂಡನ್ನಲ್ಲಿ ನಡೆದಿದೆ. ನನ್ನ ಜೊತೆ ಈ ಚಿತ್ರದಲ್ಲಿ ಪರಂವ್ಹಾ ಸೇರಿದಂತೆ ಸಾಕಷ್ಟು ಜನ ಒಳ್ಳೆ ಕಲಾವಿದರಿದ್ದಾರೆ. ನನ್ನ ಮೊದಲ ಹಿಂದಿ ಸಿನಿಮಾ ಹಾರರ್ ಆಗಿದ್ದು, ಒಳ್ಳೆ ಕಥೆ, ಪಾತ್ರ ಇದಿದ್ದರಿಂದ ಖುಷಿಯಾಗಿದ್ದೇನೆ. ಈ ಹಿಂದಿ ಸಿನಿಮಾ ಮಾಡ್ತಾ ಇರೋದು ತಂದೆ-ತಾಯಿಗೆ ಖುಷಿ ಇದೆ. ಅವರ ಸಪೊೀರ್ಟ್ನಿಂದಲೇ ನಾನು ಇಷ್ಟು ಬೆಳೆಯಲು ಆಗಿದ್ದು. ನಮ್ಮ ಕಷ್ಟ ಸುಖಗಳನ್ನು ತಂದೆ-ತಾಯಿಗಳಿಗೆ ಹೇಳಿಕೊಳ್ಳಬೇಕು ಆಗ ಅವರು ನಮಗೆ ಎಲ್ಲದಕ್ಕೂ ಸಪೊೀರ್ಟ್ ಮಾಡುತ್ತಾರೆ ಎಂದರು.

ಬೆಂಗಳೂರು ವಿವಿಯಲ್ಲಿ ಕಾಣಿಸಿಕೊಂಡಿದ್ದು ಚಿರತೆಯಲ್ಲ ಕಾಡುಬೆಕ್ಕು

ಮುಂದುವರೆದು ಮಾತನಾಡಿದ ರಾಗಿಣಿ, ಈ ಹಿಂದಿ ಸಿನಿಮಾ ಜೊತೆಗೆ ಮಲಯಾಳಂನಲ್ಲಿ ಒಂದು, ತಮಿಳು ಮೂರು ಹಾಗೂ ತೆಲುಗು ಒಂದು ಸಾಂಗ್ ಮಾಡಿದ್ದೇನೆ. ಸದ್ಯ ಕನ್ನಡದಲ್ಲಿ ಎರಡು ಸಿನಿಮಾ ಮಾಡ್ತಾ ಇದ್ದೇನೆ. ಇಂದು ಎಲ್ಲಾ ಚಿತ್ರರಂಗದಲ್ಲಿ ಒಳ್ಳೆ ಸಿನಿಮಾಗಳು ಬರುತ್ತಿದ್ದು, ನಟನೆಗೆ ಒಳ್ಳೆ ಕ್ಯಾರೆಕ್ಟರ್ ಸಿಗುತ್ತಿವೆ. ಒಟಿಟಿ ಬಂದು ನಮ್ಮಂತ ಕಲಾವಿದರಿಗೆ ದೊಡ್ಡ ವೇದಿಕೆ ಆಗಿದೆ.

ಕನ್ನಡದ ವಿಕ್ರಾಂತ್ ರೋಣ, ಕಾಂತಾರ ಸಿನಿಮಾಗಳು ಆಸ್ಕರ್ಗೆ ಹೋಗಿರೋದು ಖುಷಿ ಕೊಟ್ಟಿತು. ಕಾಂತರ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದು ಕನ್ನಡ ಇಂಡಸ್ಟ್ರೀಸ್ ಇಂದು ನ್ಯಾಷನಲ್ ಇಂಟರ್ ನ್ಯಾಷನಲ್ ಹೋಗಿದೆ. ಇದು ನಮ್ಮ ಹೆಮ್ಮೆ ಎನ್ನಬಹುದು. ತುಂಬಾ ಕಡೆ ಕನ್ನಡ ಇಂಡಸ್ಟ್ರಿ ಬಗ್ಗೆ ಒಳ್ಳೆ ಮಾತುಗಳನ್ನು ಆಡುತ್ತಾರೆ.

ಈ ವರ್ಷ ಮಾರ್ಚ್ ನಿಂದ ನನ್ನ ಸಿನಿಮಾಗಳು ಎಲ್ಲಾ ಭಾಷೆಯಿಂದ ಒಂದೊಂದು ರಿಲೀಸ್ ಆಗಬಹುದು. ನಾನೊಬ್ಬ ಭಾರತೀಯ ಎಂಬ ತಮಿಳು ಚಿತ್ರದಲ್ಲಿ ಕಮಾಂಡೋ ಪಾತ್ರ ಮಾಡಲಿದ್ದು, ಇದು ನನಗೆ ವಿಶೇಷವಾದ ಸಿನಿಮಾ ಎಂದು ಹೇಳಿದರು.

#RaginiDwivedi, #Bollywood,

Articles You Might Like

Share This Article