Friday, July 25, 2025
Homeರಾಷ್ಟ್ರೀಯ | Nationalಕರ್ನಾಟಕ ಚುನಾವಣೆಯಲ್ಲೂ ಮತ ಕಳವು ನಡೆದಿದೆ : ರಾಹುಲ್ ಗಾಂಧಿ

ಕರ್ನಾಟಕ ಚುನಾವಣೆಯಲ್ಲೂ ಮತ ಕಳವು ನಡೆದಿದೆ : ರಾಹುಲ್ ಗಾಂಧಿ

Rahul alleges electoral fraud in K’taka, Bihar, Maharashtra

ನವದೆಹಲಿ, ಜು. 24: ಕರ್ನಾಟಕದ ಚುನಾವಣೆಯಲ್ಲೂ ಮತ ಕಳವು ನಡೆದಿದೆ. ಶೀಘ್ರವೇ ಸಾಕ್ಷ್ಯಗಳನ್ನು ನೀಡುವುದಾಗಿ ವಿಪಕ್ಷ ನಾಯಕ ಹಾಗೂ ಸಂಸದ
ರಾಹುಲ್ ಗಾಂಧಿ ಹೇಳಿದ್ದಾರೆ. ಮುಂಗಾರು ಸಂಸತ್ ಅಧಿವೇಶನದಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಮಾತನಾಡಿರುವ ಅವರು, ಕರ್ನಾಟಕದ ಉದಾಹರಣೆ ನೀಡಿದರು.

ಯಾವ ರೀತಿ ಮತಕಳವು ಮಾಡಲು ಸಾಧ್ಯ ಎನ್ನುವುದನ್ನು ದೇಶದ ಜನರ ಮತ್ತು ಕೇಂದ್ರ ಚುನಾವಣಾ ಆಯೋಗದ ಮುಂದೆ ಇಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಚುನಾವಣಾ ಪ್ರಕ್ರಿಯೆಯ ಬಗ್ಗೆ ನಾವು ಆಳವಾದ ಅಧ್ಯಯನ ನಡೆಸಿದ್ದೇವೆ.

ಬೋಗಸ್ ವೋಟಿಂಗ್ ಬಗ್ಗೆ ಮಾಹಿತಿ ನಮಗೆ ಲಭ್ಯವಾಗಿದೆ. ಯಾವ ರೀತಿ ಮತಕಳವು ಮಾಡಲು ಸಾಧ್ಯ ಎನ್ನುವುದನ್ನು ಕರ್ನಾಟಕದ ಈ ಕ್ಷೇತ್ರದ ಮೂಲಕವೇ ದೇಶದ ಜನರ ಮತ್ತು ಕೇಂದ್ರ ಚುನಾವಣಾ ಆಯೋಗದ ಮುಂದೆ ಇಡುತ್ತೇವೆ. ಸದ್ಯದಲ್ಲೇ ಎಲ್ಲಾ ವಿಚಾರಗಳ ಸತ್ಯವನ್ನು ಬಹಿರಂಗಪಡಿಸಲಿದ್ದೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಗದ್ದಲದ ನಡುವೆಯೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎನ್ನುವ ಆರೋಪ ಮಾಡಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಡಿಯಲ್ಲಿ ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಚುನಾವಣಾ ಅಧಿಕಾರಿಗಳು ಇಲ್ಲಿಯವರೆಗೆ 52 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ವಿಳಾಸಗಳಲ್ಲಿ ಇರಲಿಲ್ಲ ಮತ್ತು ಇನ್ನೂ 18 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎನ್ನುವ ವಿಚಾರ ಬಹಿರಂಗಗೊಂಡ ಬಳಿಕ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಹೇಗೆ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎನ್ನುವ ಬಗ್ಗೆ ನಾವು ಎಲ್ಲರಿಗೂ ತೋರ್ಪಡಿಸಿದ್ದೆವು. ಅದೇ ರೀತಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲೂ ನಾವು ತನಿಖೆ ನಡೆಸಿದ್ದೇವೆ. ಅಲ್ಲಿ ದೊಡ್ಡ ಮಟ್ಟದಲ್ಲಿ ಮತಗಳ ಕಳ್ಳತನ ನಡೆದಿರುವುದು ಕಂಡುಬಂದಿದೆ. ಈ ಬಗ್ಗೆ ಶೀಘ್ರವೇ ಜನತೆಯ ಮುಂದೆ ಸಾಕ್ಷಿ ಸಮೇತ ಮಾಹಿತಿ ನೀಡಲಿದ್ದೇವೆ ಎಂದಿದ್ದಾರೆ.

ಸಮಸ್ಯೆ ಏನೆಂದರೆ, ಅವರು ಮತದಾರರ ಪಟ್ಟಿಯನ್ನು ಕಾಗದದ ರೂಪದಲ್ಲಿ ನೀಡುತ್ತಾರೆ. ನಾವು ಅಂಥ ಪಟ್ಟಿಗಳನ್ನು ವಿಶ್ಲೇಷಿಸಲು ಸಾಧ್ಯವಿಲ್ಲ. ನಾವು ಮತದಾರರ ಪಟ್ಟಿಯನ್ನು ಸಂಗ್ರಹಿಸಿ ಡಿಜಿಟಲೈಸ್ ಮಾಡಿದ್ದು, ಅದಕ್ಕೆ ಆರು ತಿಂಗಳು ಹಿಡಿಯಿತು. ಈ ಪ್ರಕ್ರಿಯೆಯಿಂದ ನಾವು ಆಯೋಗದ ಕಳ್ಳಾಟವನ್ನ ಪತ್ತೆಹಚ್ಚಿದೆವು.

ಯಾರು ಮತ ಹಾಕುತ್ತಾರೆ, ಮತದಾರರನ್ನು ಹೇಗೆ ಸೇರಿಸಲಾಗುತ್ತದೆ, ಹಳೆಯವರನ್ನು ಹೇಗೆ ತೆಗೆದುಹಾಕಲಾಗುತ್ತದೆ ಎಂಬುದನ್ನು ತಿಳಿದುಕೊಂಡೆವು ಎಂದು ರಾಹುಲ್ ಗಾಂಧಿ ಹೇಳಿದರು. ರಾಹುಲ್ ಗಾಂಧಿ ವಿಡಿಯೋ2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 17 ಸ್ಥಾನಗಳನ್ನು ಪಡೆದಿತ್ತು.ಇದೇ ವೇಳೆ ಕರ್ನಾಟಕದ ಯಾವ ಲೋಕಸಭಾ ಕ್ಷೇತ್ರವನ್ನ ಅಧ್ಯಯನ ಮಾಡಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ಹೇಳಿಲ್ಲ.

RELATED ARTICLES

Latest News