Friday, November 22, 2024
Homeರಾಷ್ಟ್ರೀಯ | Nationalಅಮೇಥಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಡೌಟ್

ಅಮೇಥಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಡೌಟ್

ನವದೆಹಲಿ,ಏ.30- ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳು ಕ್ಷೀಣಿಸಿವೆ.

ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ಬರೇಲಿ ಎರಡೂ ಮೇ 20ರಂದು ಚುನಾವಣೆ ನಡೆಯಲಿದೆ. ಈ ಎರಡೂ ಲೋಕಸಭಾ ಕ್ಷೇತ್ರಗಳಿಂದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಎಐಸಿಸಿ ಗಂಭೀರವಾಗಿ ಚಿಂತನೆ ನಡೆಸಿತ್ತು.

ಆದರೆ ಇದೀಗ ಈ ವದಂತಿಗಳಿಗೆ ತೆರೆಬಿದ್ದಿದು ಪ್ರಿಯಾಂಕ ವಾದ್ರಾ ಅವರು ರಾಯ್‌ಬರೇಲಿಯಿಂದ ಸ್ಪರ್ಧೆ ಮಾಡದೆ ಕೇವಲ ಚುನಾವಣಾ ಪ್ರಚಾರವನ್ನು ನಡೆಸಲು ಸಮ್ಮತಿಸಿದ್ದಾರೆಂದು ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಮೇಥಿ ಅಥವಾ ರಾಯ್ಬರೇಲಿಯಿಂದ ಸ್ಪರ್ಧಿಸುವ ಬಗ್ಗೆ ಅಂತಿಮ ನಿರ್ಧಾರವನ್ನು 24 ಗಂಟೆಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಎಐಸಿಸಿ ಮೂಲಗಳು ಖಚಿತಪಡಿಸಿವೆ.

ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಅಮೇಥಿ ಮತ್ತು ರಾಯ್‌ಬರೇಲಿ ಅಭ್ಯರ್ಥಿಗಳನ್ನಾಗಿ ಮಾಡಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಲಾಗಿದೆ.

ಸಭೆಯಲ್ಲಿ ಉತ್ತರಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪಕ್ಷದ ಅಭ್ಯರ್ಥಿ ಮಾಡಬೇಕೆಂದು ಬಲವಾದ ಒತ್ತಡ ಬಂದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ, ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು 2004ರಿಂದ 2014ರವರೆಗೆ ಪ್ರತಿನಿಧಿಸಿದ್ದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಲ್ಲಿ ರಾಹುಲ್‌ ಗಾಂಧಿಯನ್ನು ಪರಾಭವಗೊಳ್ಳಿಸಿದ್ದರು.

ಏಪ್ರಿಲ್‌ 26ರಂದು ಚುನಾವಣೆ ನಡೆದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ರಾಹುಲ್‌ಗಾಂಧಿ ಎರಡನೇ ಅವಧಿ ಗೆ ಸ್ಪರ್ಧಿಸುತ್ತಿದ್ದಾರೆ.ಏತನ್ಮಧ್ಯೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಸ್ಥಳಾಂತರಗೊಂಡ ಕಾರಣ ಈ ತಿಂಗಳ ಆರಂಭದಲ್ಲಿ 2004 ರಿಂದ ಪ್ರತಿನಿಧಿಸುತ್ತಿದ್ದ ರಾಯ್ಬರೇಲಿ ಸ್ಥಾನವನ್ನು ತೆರವು ಮಾಡಿದರು.

RELATED ARTICLES

Latest News