ಭಾರತ್ ಜೋಡೋ ಯಾತ್ರೆ ಸಮಾರೋಪದಲ್ಲಿ ಭಾಗವಹಿಸಲು ದೇವೇಗೌಡರಿಗೆ ಆಹ್ವಾನ

Social Share

ಬೆಂಗಳೂರು,ಜ.24- ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಪತ್ರದ ಮುಖೇನ ಪ್ರತಿಕ್ರಿಯಿಸಿರುವ ದೇವೇಗೌಡರು, ಆಹ್ವಾನ ನೀಡಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಜನವರಿ 10ರಂದು ನಿಮ್ಮ ಆಹ್ವಾನ ತಲುಪಿದೆ. ರಾಹುಲ್‍ಗಾಧಿ ಅವರು ದೇಶದ ಸೌಹಾರ್ದತೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿಲೋ ಮೀಟರ್ ಪಾದಯಾತ್ರೆ ನಡೆಸಿರುವುದು ಶ್ಲಾಘನೀಯವಾಗಿದೆ. ಇದು ಅತ್ಯಂತ ಪ್ರಸ್ತುತವಾಗಿತ್ತು ಎಂದಿದ್ದಾರೆ.

ಮಹಿಳೆಯರ ಮತ ಗೆಲ್ಲಲು ರಾಜಕೀಯ ಪಕ್ಷಗಳಿಂದ ಭರ್ಜರಿ ಘೋಷಣೆ

ಜನವರಿ 30ರಂದು ಶ್ರೀನಗರದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ರಾಹುಲ್‍ಗಾಂಧಿಯವರಿಗೆ ನನ್ನ ಶುಭ ಹಾರೈಕೆಗಳಿವೆ. ಅವರು ದ್ವೇಷ ಮತ್ತು ದೌರ್ಜನ್ಯದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಜನರಲ್ಲಿ ಭಾತೃತ್ವ ಬಿತ್ತುತ್ತಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸಿ ಎಂದು ಹೇಳಿದ್ದಾರೆ.

Rahul Gandhi, Bharat Jodo Yatra, HD Deve Gowda,

Articles You Might Like

Share This Article