ಇಂದಿನಿಂದ ಮತ್ತೆ ಆರಂಭವಾದ ಭಾರತ್ ಜೋಡೋ ಯಾತ್ರೆ

Social Share

ನವದೆಹಲಿ,ಜ.3- ಈಗಾಗಲೇ 3000 ಕಿ.ಮೀ ಕ್ರಮಿಸಿರುವ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಪುನರಾರಂಭಗೊಂಡಿದೆ. ಒಂಬತ್ತು ದಿನಗಳ ಬಿಡುವಿನ ನಂತರ ಯಾತ್ರೆ ಆರಂಭಗೊಂಡಿದ್ದು, ಇಂದು ಬೆಳಿಗ್ಗೆ ದೆಹಲಿಯ ಯಮುನಾ ಬಜಾರ್ ಪ್ರದೇಶದಲ್ಲಿರುವ ಹನುಮಾನ್ ಮಂದಿರದಿಂದ ಉತ್ತರ ಪ್ರದೇಶದತ್ತ ಯಾತ್ರೆ ಪ್ರಯಾಣ ಬೆಳೆಸಲಿದೆ.

ದೇವಾಲಯಕ್ಕೆ ಭೇಟಿ ನೀಡಿದ ರಾಹುಲ್‍ಗಾಂಧಿ ಅವರಿಗೆ ಅಲ್ಲಿನ ಅರ್ಚಕರು ಗಧೆ ನೀಡಿ ಸನ್ಮಾನಿಸಿದರು. ಸುಮಾರು 15 ನಿಮಿಷಗಳ ಕಾಲ ದೇವಾಲಯದ ಆಡಳಿತ ಮಂಡಳಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ರಾಹುಲ್ ಅವರು ಕೆಲವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

ಪರಮಪೂಜ್ಯರ ಇಚ್ಚೆಯಂತೆಯೇ ಅಂತಿಮ ವಿಧಿವಿಧಾನ : ಸಿಎಂ

ಯಾತ್ರೆಯು ಇಂದು ಮಧ್ಯಾಹ್ನ ದೆಹಲಿ ಗಡಿಯಲ್ಲಿರುವ ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಲೋನಿಯನ್ನು ತಲುಪಲಿದೆ ಮತ್ತು ನಂತರ ಹರಿಯಾಣ, ನಂತರ ಪಂಜಾಬ್ ಮತ್ತು ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಲಿದೆ.

ಕಳೆದ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆ ಈಗಾಗಲೇ 3,000 ಕಿಲೋಮೀಟರ್‍ಗಳನ್ನು ಕ್ರಮಿಸಿದ್ದು, ಜ.30 ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜಾರೋಹಣದೊಂದಿಗೆ ಅಂತ್ಯಗೊಳ್ಳಲಿದೆ.

ಪರಮಪೂಜ್ಯರ ಇಚ್ಚೆಯಂತೆಯೇ ಅಂತಿಮ ವಿಧಿವಿಧಾನ : ಸಿಎಂ

ಪದೇ ಪದೇ ಹಿಂದೂಗಳ ವಿರುದ್ಧ ಹೇಳಿಕೆ ನೀಡುವ ರಾಹುಲ್ ಗಾಂಧಿ ಅವರಿಗೆ ಇದೀಗ ಹಿಂದೂಗಳ ಅನುಕಂಪಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಪೂಜಾ ಮಂದೀರಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರ ನಾಟಕ ಜನರಿಗೆ ಗೊತ್ತಿದೆ ಎಂದು ಬಿಜೆಪಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದೆ.

Rahul Gandhi, Bharat Jodo Yatra,

Articles You Might Like

Share This Article