ಅಹಮದಾಬಾದ್,ನ.30- ಕೊರೊನಾ ಅಟ್ಟಹಾಸದ ಸಂದರ್ಭದಲ್ಲಿ ಕೊವಿಡ್ ಲಸಿಕೆಯನ್ನು ಮೋದಿ ಲಸಿಕೆ ಎಂದು ಕಾಂಗ್ರೆಸ್ ಟೀಕಿಸಿತ್ತು. ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಡಿ ಎಂದು ಜನರಿಗೆ ಎಚ್ಚರಿಕೆ ನೀಡಿದ್ದ ರಾಹುಲ್ ಗಾಂಧಿ ಗುಟ್ಟಾಗಿ ಲಸಿಕೆಯನ್ನು ಹಾಕಿಸಿಕೊಂಡಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಕೊವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಜನರ ದಾರಿತಪ್ಪಿಸಲು ತೀವ್ರ ತಂತ್ರ ಮಾಡಿದರು ಆದರೆ ಆದು ಸಾಧ್ಯವಾಗಲಿಲ್ಲ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್‍ನಲ್ಲಿ ಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಮಸೂದೆಯನ್ನು ಸಂಸತ ನಲ್ಲಿ ಮಂಡಿಸಿದಾಗ ವಿರೋಧ ಪಕ್ಷದ ನಾಯಕರು ಕಾಗೆಗಳಂತೆ ಕೂಗಿದರು,
ದಾಖಲೆ ಇಲ್ಲದ 90 ಲಕ್ಷ ಮೌಲ್ಯದ ಆಭರಣ, 22 ಲಕ್ಷ ಹಣ ವಶಕ್ಕೆ
ರಾಹುಲ್ ಗಾಂಧಿ ಟ್ವೀಟ್ ಮೂಲಕ ಕೊವಿಡ್ ಲಸಿಕೆಯನ್ನು ತೆಗೆದುಕೊಳ್ಳಬೇಡಿ. ಏಕೆಂದರೆ ಅದು ಮೋದಿ ಲಸಿಕೆ ಮತ್ತು ಅದರಿಂದ ನಿಮಗೆ ಹಾನಿಯಾಗುತ್ತದೆ ಎಂದು ಹೇಳುವ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಅದೃಷ್ಟವಶಾತ, ಯಾರೂ ರಾಹುಲ್ ಗಾಂಧಿಯ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಹೇಳಿದ್ದಾರೆ.
ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್..?
ಗುಜರಾತ್‍ನಲ್ಲಿ ಕಾಂಗ್ರೆಸ್ ನಾಯಕರು ಹಿಂದೂಗಳು ಮತ್ತು ಮುಸ್ಲಿಮರು ಪರಸ್ಪರ ಹೊಡೆದಾಡಿಕೊಳ್ಳುವಂತೆ ಮಾಡುವುದನ್ನು ಬಿಟ್ಟರೆ ಬೇರೇನೂ ಮಾಡಲಿಲ್ಲ. ಬಿಜೆಪಿ ಸರ್ಕಾರವು ಗಲಭೆಗಳನ್ನು ನಿರ್ಮೂಲನೆ ಮಾಡಿತು. ಶಾಂತಿಯನ್ನು ಸ್ಥಾಪಿಸಿದೆ ಎಂದು ತಿಳಿಸಿದರು.
Rahul Gandhi, Covid-19, Vaccine, Against, Amit Shah,