Monday, October 14, 2024
Homeರಾಷ್ಟ್ರೀಯ | Nationalರಾಹುಲ್ ವಿರುದ್ಧ ಅಮಿತ್ ಶಾ ಆಕ್ರೋಶ

ರಾಹುಲ್ ವಿರುದ್ಧ ಅಮಿತ್ ಶಾ ಆಕ್ರೋಶ

‘Rahul Gandhi hurt nation's sentiments': Amit Shah slams Congress MP's remarks in US

ನವದೆಹಲಿ,ಸೆ.11– ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಕಾಶ್ಮೀರ ಮತ್ತು ಜೆಕೆಎನ್ಸಿಯ ರಾಷ್ಟ್ರ ವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರಲಿ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಿರಲಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಮತ್ತು ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ಅವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್ನ ರಾಜಕೀಯವನ್ನು ಬಯಲಿಗೆಳೆಯುತ್ತದೆ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ಮೀಸಲಾತಿ ರದ್ದುಪಡಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಮತ್ತೊಮೆ ಕಾಂಗ್ರೆಸ್ನ ಮೀಸಲಾತಿ ವಿರೋಧಿ ಮುಖವನ್ನು ಮುನ್ನೆಲೆಗೆ ತಂದಿದ್ದಾರೆ. ಅವನ ಮನಸ್ಸಿನಲ್ಲಿದ್ದ ಆಲೋಚನೆಗಳು ಅಂತಿಮವಾಗಿ ಪದಗಳಾಗಿ ಹೊರಹೊಮಿವೆ ಎಂದು ಟೀಕಿಸಿದ್ದಾರೆ.

RELATED ARTICLES

Latest News