ಯುಪಿ ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Social Share

ನವದೆಹಲಿ, ಡಿ.21- ವಿಧಾನಸಭಾ ಚುನಾವಣೆಗಳು ನಡೆಯಲಿರುವ ಉತ್ತರ ಪ್ರದೇಶದ ಯುವ ಜನತೆಗಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾಂಗ್ರೆಸ್ ಪಕ್ಷ ಮಾತ್ರ ರಾಜ್ಯದ ಯುವ ಜನತೆಗೆ ಹೊಸ ಮುನ್ನೋಟ ನೀಡಬಲ್ಲದು ಎಂದು ಅವರು ಪ್ರತಿಪಾದಿಸಿದರು.
ಭಾರ್ತಿ ವಿಧಾನ್ ಶೀರ್ಷಿಕೆಯ ಯುವ ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ಗಾಂ ಅವರು ಈ ಮುನ್ನೋಟ ದಾಖಲೆಗಳು ಪೊಳ್ಳು ಮಾತುಗಳಲ್ಲ. ಆದರೆ, ಯುವಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇದನ್ನು ಸಿದ್ಧಪಡಿಸಲಾಗಿದೆ ಎಂದರು.
ನಾವು ಯುವಕರ ಬಲದೊಂದಿಗೆ ನೂತನ ಉತ್ತರ ಪ್ರದೇಶವನ್ನು ನಿರ್ಮಿಸಬಯಸುತ್ತೇವೆ. ನಾವು ದ್ವೇಷ ಹರಡುವುದಿಲ್ಲ. ನಾವು ಜನರನ್ನು ಒಗ್ಗೂಡಿಸುತ್ತೇವೆ ಎಂದು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ನುಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯದ ಬಹುದೊಡ್ಡ ಸಮಸ್ಯೆ ಎಂದರೆ ಉದ್ಯೋಗ ನೇಮಕಾತಿ.
ಯುವಕರು ಉದ್ಯೋಗ ಸಿಗದೆ ಹತಾಶರಾಗಿದ್ದಾರೆ ಎಂದರು.ನಮ್ಮ ಪಕ್ಷವು ಅಭಿವೃದ್ಧಿಗೆ ಒತ್ತು ನೀಡಲಿದೆಯೇ ಹೊರತು ಜಾತಿ ಅಥವಾ ಕೋಮುವಾದ ಆಧರಿಸಿ ನಡೆಯುತ್ತಿರುವ ನಕಾರಾತ್ಮಕ ಪ್ರಚಾರಕ್ಕೆ ಕಿವಿಗೊಡುವುದಿಲ್ಲ ಎಂದು ಪ್ರಿಯಾಂಕಾ ಪ್ರತಿಪಾದಿಸಿದರು.ಪಕ್ಷವು ಯುವಕರು ಮತ್ತು ಮಹಿಳೆಯರಿಗೆ ಆದ್ಯತೆ ಕೊಟ್ಟಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಶೇ.40ರಷ್ಟು ಟಿಕೆಟ್ಗಳನ್ನು ಮಹಿಳೆಯರಿಗೆ ಮೀಸಲಿಟ್ಟಿದೆ ಎಂದರು.
403 ಸದಸ್ಯಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆ.10ರಿಂದ ಮಾರ್ಚ್ 7ರ ವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ.10ರಂದು ಮತಗಳ ಎಣಿಕೆ ನಡೆಯಲಿದೆ.

Articles You Might Like

Share This Article