ನವದೆಹಲಿ,ಫೆ.20- ಭಾರತ್ ಜೋಡೋ ಯಾತ್ರೆ ಯಶಸ್ವಿ ಗುಂಗಿನಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್‍ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಜಾಲಿ ಮೂಡ್‍ನಲ್ಲಿದ್ದಾರೆ.
ಸಹೋದರಿ ಪ್ರಿಯಾಂಕಾ ಅವರೊಂದಿಗೆ ಜಮ್ಮು-ಕಾಶ್ಮೀರದ ಗುಲ್ಮಾರ್ಗ್‍ನಲ್ಲಿರುವ ರಾಹುಲ್‍ಗಾಂಧಿ ಅವರು ಹಿಮ ವಾಹನದಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ರಾಹುಲ್‍ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಗುಲ್ಮಾರ್ಗ್ ಪ್ರವಾಸಿ ತಾಣಗಳಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ತುಣುಕುಗಳನ್ನು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಅಸುರರ ಪಟ್ಟಿಯೇ ಇದೆ : ಸಿಎಂ ಗರಂ
ಈ ವೀಡಿಯೊದಲ್ಲಿ ರಾಹುಲ್ ಗಾಂಧಿ, ಸ್ಕೀ ಕನ್ನಡಕಗಳಲ್ಲಿ ಮತ್ತು ಪ್ರಿಯಾಂಕಾ ಗಾಂಧಿ ಬಿಳಿಯ ಭೂದೃಶ್ಯದ ಮೂಲಕ ಹಿಮವಾಹನವನ್ನು ಸರದಿಯಲ್ಲಿ ಸವಾರಿ ಮಾಡುತ್ತಿದ್ದರೆ, ಇನ್ನೊಬ್ಬರು ಪಿಲಿಯನ್ ಸವಾರ ಇರುವುದು ಕಂಡು ಬರುತ್ತಿದೆ.
Rahul Gandhi, Priyanka, Take, Gulmarg, Snowmobiles,