ನಾಳೆ ಬೆಳಗಾವಿಗೆ ರಾಹುಲ್ ಗಾಂಧಿ

Social Share

ಬೆಳಗಾವಿ,ಮಾ.19- ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಾಳೆ ವಾಣಿಜ್ಯನಗರಿ ಬೆಳಗಾವಿಗೆ ಆಗಮಿಸುತ್ತಿದ್ದು, ಯುವಕ್ರಾಂತಿ ಸಮಾವೇಶ ನಡೆಸಲಿದ್ದಾರೆ.

ನಾಳೆ ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶದ ಸ್ಥಳ ನಗರದ ಸಿಪಿಎಡ್ ಮೈದಾನಕ್ಕೆ ಆಗಮಿಸಲಿದ್ದಾರೆ. 1 ಗಂಟೆಯಿಂದ 3.30ರ ವರೆಗೆ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಮಾವೇಶಕ್ಕೆ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಪಾಕಿಸ್ತಾನದಲ್ಲಿ ಇಮ್ರಾನ್‍ಖಾನ್ ಪಕ್ಷವನ್ನೇ ನಿಷೇಧಿಸಲು ಚರ್ಚೆ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೆ ಕಾಂಗ್ರೆಸ್ ಮೂರು ಗ್ಯಾರಂಟಿಗಳನ್ನು ಘೋಷಿಸಿದ್ದು, ರಾಹುಲ್ ಗಾಂಧಿಯವರ ಮೂಲಕ ನಾಳೆ ನಾಲ್ಕನೇ ಗ್ಯಾರಂಟಿ ಘೋಷಿಸುವ ಸಾಧ್ಯತೆ ಇದೆ. ಯುವಕರಿಗೆ ಉದ್ಯೋಗ ಭರವಸೆ ಅಥವಾ ನಿರುದ್ಯೋಗಿಗಳಿಗೆ ಭತ್ಯೆಯಂತಹ ಘೋಷಣೆಯ ನಿರೀಕ್ಷೆ ಇದೆ.

ಈಗಾಗಲೆ, 200 ಯುನಿಟ್ ವರೆಗೆ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಹಾಗೂ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿದೆ. ಸೋಮವಾರ ನಾಲ್ಕನೇ ಗ್ಯಾರಂಟಿ ಘೋಷಣೆಯಾಗುವ ಸಾಧ್ಯತೆ ಇದೆ.

ಬೆಳಗಾವಿ ಜಿಲ್ಲೆಯಲ್ಲಿ 18 ವಿಧಾನ ಸಭೆ ಕ್ಷೇತ್ರಗಳಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಆದರೆ ನಂತರ ನಡೆದ ಆಪರೇಶನ್ ಕಮಲದಲ್ಲಿ ಮೂವರು ಬಿಜೆಪಿಗೆ ಜಿಗಿದಿದ್ದರು. ಸಧ್ಯ ಕಾಂಗ್ರೆಸ್ ನಲ್ಲಿ 5 ಶಾಸಕರಿದ್ದಾರೆ.

ಪಂಜಾಬ್‍ನಲ್ಲಿ ಇಂಟರ್ನೆಟ್‌ ಸ್ಥಗಿತ : ಅಮೃತಪಾಲ್ ಬಂಧನಕ್ಕೆ ಶೋಧ

ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದ ಬೆಳಗಾವಿ ಜಿಲ್ಲೆಯನ್ನು ಮತ್ತೆ ಕೈ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಕನಿಷ್ಟ 10 -12 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಸತೀಶ್ ಜಾರಕಿಹೊಳಿ ವ್ಯಕ್ತಪಡಿಸಿದ್ದಾರೆ.

Rahul Gandhi, visit, Belgaum, March 20,

Articles You Might Like

Share This Article