ನವದೆಹಲಿ, ಏ. 17: ಸಂಸದ ರಾಹುಲ್ ಗಾಂಧಿ ಅವರು ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಬ್ರೌನ್ ವಿಶ್ವವಿದ್ಯಾಲಯದ ಬೋಧಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಏಪ್ರಿಲ್ 21 ಮತ್ತು 22ರಂದು ರಾಹುಲ್ ಗಾಂಧಿ ಅಮೆರಿಕದ ರೋಡ್ ಐಲೆಂಡ್ ನಲ್ಲಿರುವ ಬ್ರೌನ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ತಿಳಿಸಿದ್ದಾರೆ.
ಅವರು ಅಲ್ಲಿ ಉಪನ್ಯಾಸ ನೀಡಲಿದ್ದಾರೆ ಮತ್ತು ಬೋಧಕವರ್ಗದ ಸದಸ್ಯರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಖೇರಾ ಹೇಳಿದರು. ರೋಡ್ ಐಲೆಂಡ್‌ಗೆ ಭೇಟಿ ನೀಡುವ ಮೊದಲು, ಲೋಕಸಭೆಯ ವಿರೋಧ ಪಕ್ಷದ ನಾಯಕರು ಎನ್‌ಆರ್‌ಐ ಸಮುದಾಯದ ಸದಸ್ಯರು, ಭಾರತೀಯ ಸಾಗರೋತ್ತರ ಕಾಂಗ್ರೆಸ್ (ಐಒಸಿ) ಪದಾಧಿಕಾರಿಗಳು ಮತ್ತು ಸದಸ್ಯರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.