Friday, November 22, 2024
Homeರಾಜ್ಯರಾಯಚೂರು ಏಮ್ಸೌ ಕುರಿತು ಮೇಲ್ಮನೆಯಲ್ಲಿ ವಾಕ್ಸಮರ

ರಾಯಚೂರು ಏಮ್ಸೌ ಕುರಿತು ಮೇಲ್ಮನೆಯಲ್ಲಿ ವಾಕ್ಸಮರ

ಬೆಂಗಳೂರು,ಜು.15- ರಾಯಚೂರಿ ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸೌ) ಸ್ಥಾಪನೆ ಮಾಡುವ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಿಧಾನ ಪರಿಷತ್ನಲ್ಲಿ ಭಾರೀ ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ತಿಪ್ಪೇಸ್ವಾಮಿ ಅವರು ರಾಯಚೂರಿನಲ್ಲಿ ಏಮ್ಸೌ ಆಸ್ಪತ್ರೆಯನ್ನು ಯಾವಾಗ ಸ್ಥಾಪನೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ರಾಯಚೂರಿನಲ್ಲಿ ಏಮ್ಸೌ ಸ್ಥಾಪನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ಸಂಸದರು, ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ಕೇಂದ್ರದ ಆರೋಗ್ಯ ಸಚಿವರನ್ನು ಎರಡು ಬಾರಿ ಭೇಟಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಏಮ್ಸೌ ಆಸ್ಪತ್ರೆ ಸ್ಥಾಪನೆ ಮಾಡಿದರೆ ಭೂಮಿ, ವಿದ್ಯುತ್, ನೀರು ಸೇರಿದಂತೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ಹೇಳಿದ್ದೆವು. ಆದರೂ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ದೇಶದ ಎಲ್ಲ ರಾಜ್ಯಗಳಲ್ಲೂ ಏಮ್ಸೌ ಸ್ಥಾಪನೆ ಮಾಡಲು ಅವಕಾಶ ನೀಡಲಾಗಿದೆ ಆದರೆ ಕರ್ನಾಟಕ ಮತ್ತು ಕೇರಳಕ್ಕೆ ಅವಕಾಶ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ಷೇಪಿಸಿದರು.

ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ ಉಂಟಾಯಿತು. ಬಿಜೆಪಿಯ ಸಿ.ಟಿ.ರವಿ ಅವರು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ. ಐಐಟಿ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರವಲ್ಲವೇ? ಎಂದು ಪ್ರಶ್ನೆ ಮಾಡಿದರು.

ಆಗ ಆಡಳಿತ ಪಕ್ಷ ಪ್ರಿಯಾಂಕ ಖರ್ಗೆ ಸೇರಿದಂತೆ ಮತ್ತಿತರರು ಕೇಂದ್ರ ಸರ್ಕಾರವೇನೂ ನಮ್ಮಗೆ ದಾನ ಕೊಡುತ್ತದೆಯೇ? ನಾವೇನು ಕೇಂದ್ರಕ್ಕೆ ತೆರಿಗೆ ಕಟ್ಟುವುದಿಲ್ಲವೇ? ಕರ್ನಾಟಕಕ್ಕೆ ಏಮ್ಸೌ ಮಂಜೂರು ಮಾಡಲು ನಿಮ ಪ್ರಧಾನಿಗೆ ಹೇಳಿ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿಗಳು ಅನೇಕ ಬಾರಿ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರೂ ಸ್ಪಂದಿಸಿಲ್ಲ. ಇನ್ನು ಎಷ್ಟು ಬಾರಿ ಪ್ರಯತ್ನಿಸಬೇಕು, ನಮ್ಮಗೇನು ಉಚಿತವಾಗಿ ಕೊಡುವುದಿಲ್ಲ. ಬೇರೆ ರಾಜ್ಯಗಳಿಗೆ ಕೊಟ್ಟಂತೆ ನಮ್ಮಗೂ ಕೊಡಬೇಕು ಎಂಬುದಷ್ಟೇ ನಮ್ಮ ಮನವಿ. ನಿಮ ಸಂಸದರ ಮೂಲಕ ಒತ್ತಡ ಹಾಕಿ ಶರಣಪ್ರಕಾಶ್ ಪಾಟೀಲ್ ಸಿ.ಟಿ.ರವಿಗೆ ತಿರುಗೇಟು ನೀಡಿದರು.

RELATED ARTICLES

Latest News