ಬೆಂಗಳೂರು : ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿದೆ. ಕಳೆದ ಮೂರು ತಿಂಗಳಲ್ಲಿ 11ಮಂದಿ ಬಾಣಂತಿಯರು ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದು ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಎಂದು ಸಾರ್ವಜನಿಕರು ದೂರಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲೇ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸರಸ್ವತಿ (24) ಮೃತ ಬಾಣಂತಿ ಎಂದು ತಿಳಿದುಬಂದಿದೆ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ಹೇಳಲಾಗಿದೆ.
ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5ರಂದು ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರಿದಿದೆ.
ಇದರಿಂದಾಗಿ ಆಸ್ಪತ್ರೆಯ ವೈದ್ಯಕೀಯ ಸೌಲಭ್ಯಗಳ ಕುರಿತು ಪ್ರಶ್ನೆಗಳು ಎದ್ದಿವೆ. ಸರ್ಕಾರ ಈ ಸಾವುಗಳ ಕುರಿತು ತನಿಖೆ ನಡೆಸುತ್ತಿದೆ.