Saturday, November 2, 2024
Homeರಾಜ್ಯಕನ್ನಡದಲ್ಲಿ ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆಗೆ ಅನುಮತಿ : ಕೇಂದ್ರ ಸಚಿವ ವಿ.ಸೋಮಣ್ಣ

ಕನ್ನಡದಲ್ಲಿ ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆಗೆ ಅನುಮತಿ : ಕೇಂದ್ರ ಸಚಿವ ವಿ.ಸೋಮಣ್ಣ

Railway Department recruitment test in Kannada: V. Somanna

ಮೈಸೂರು, ಅ.29– ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹ್ದುೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದ ವಿಜ್ಞಾನ ಭವನದಲ್ಲಿ ಹಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ರೋಜ್‌ಗಾರ್‌ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳ ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದ್ಯೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್‌ ಮೋಡ್‌ ನಲ್ಲಿ 5.2 ಲಕ್ಷ ಉದ್ಯೋಗಗಳನ್ನು ನೀಡಲಾಗಿದೆ ಎಂದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನಮಂತ್ರಿ ಜನ್‌-ಧನ್‌ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷಾನ್‌ ಭಾರತ್‌ ಯೋಜನೆ, ಮುದ್ರಾ ಯೋಜನೆ, ಬೇಟಿ ಬಚಾವ್‌ ಬೇಟಿ ಪಡಾವೋ ಮುಂತಾದ ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ಧಿ ಮಾಡಿದೆ. ವಾಕ್‌ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು.

ದೇಶಕ್ಕೆ ತನ್ನದೇ ಅದ ಪರಂಪರೆ ಇದೆ, ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದ್ಯೋಗ ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್‌ ಕೃಷ ದತ್ತ ಚಾಮರಾಜ ಒಡೆಯರ್‌ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.

ಶಾಸಕ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆ ನಿರ್ದೇಶಕ ಸಂದೇಶ್‌ ಮಹದೇವಪ್ಪ, ರೈಲ್ವೆ ಇಲಾಖೆಯ ಡಿಆರ್‌ಎಂ ಶಿಲ್ಪಿ ಅಗರ್ವಾಲ್‌‍, ಆಯುಷ್‌ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪ್ಟೋ್‌ ಮಾಸ್ಟರ್‌ ಜನರಲ್‌ ಮ್ಯಾನೇಜರ್‌ ಚಂದ್ರಶೇಖರ್‌ ಕಾಕುಮಾನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News