ಬೆಂಗಳೂರು,ಜು.1- ಕರಾವಳಿ, ಮಲೆನಾಡು, ಕೇರಳದ ವೈನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಪ್ರಮುಖ ಜಲಾಶಯವಾದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಕೇರಳದಲ್ಲಿ ಭಾರಿ ಮಳೆಯಾದ ಪರಿಣಾಮ ಕೆಆರ್‌ಎಸ್, ಕಬಿನಿ ಜಲಾಶಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಹೆಚ್ಚಾಗಿತ್ತು.
ಮಳೆ ಕಡಿಮೆಯಾದ ಬೆನ್ನಲ್ಲೇ ಒಳಹರಿವಿನ ಪ್ರಮಾಣ ಇಳಿಕೆಯಾಗಿದೆ. ಕೆಆರ್‌ಎಸ್ ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್‌್ಸನಷ್ಟು ಒಳಹರಿವು ಇಂದು ಇತ್ತು. ಮತ್ತೆ ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಹೆಚ್ಚಳವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಹೀಗಾಗಿ ಇನ್ನಷ್ಟು ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ.
ಗರಿಷ್ಠ 49.452 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 19.487 ಟಿಎಂಸಿ ನೀರಿದೆ. ನಿನ್ನೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌್ಸನಷ್ಟು ಒಳಹರಿವು ಇತ್ತು. ಜಲಾಶಯದಿಂದ 500 ಕ್ಕೂ ಹೆಚ್ಚು ಕ್ಯೂಸೆಕ್ಸ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ.
ಹವಾಮಾನದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಹಾಗೂ ಅರಬ್ಬಿಸಮುದ್ರದದಲ್ಲಿ ಟ್ರಪ್ ನಿರ್ಮಾಣವಾಗಿದೆ. ಇದು ಕೇರಳದ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ವ್ಯಾಪಕವಾಗಿ ಹರಡಿಕೊಂಡಿರುವುದರಿಂದ ಕೇರಳ, ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡನಲ್ಲ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ. ತಂಪಾದ ಮೇಲೈ ಗಾಳಿ ಆಗಾಗ್ಗೆ ಬೀಸುವುದರಿಂದ ಚಳಿಯ ವಾತಾವರಣ ಹೆಚ್ಚಾಗಲಿದೆ.