ರಾಜ್ಯದ ಹಲವು ಭಾಗಗಳಲ್ಲಿ ಇನ್ನೆರೆಡು ದಿನ ಮಳೆ

ಬೆಂಗಳೂರು,ಏ.21- ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೆರೆಡು ದಿನಗಳ ಕಾಲ ಮುಂದುವರೆಯಲಿದೆ. ವಾತಾವರಣದಲ್ಲಿ ಟ್ರಪ್ ಉಂಟಾಗಿರುವ ಪರಿಣಾಮ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮತ್ತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ … Continue reading ರಾಜ್ಯದ ಹಲವು ಭಾಗಗಳಲ್ಲಿ ಇನ್ನೆರೆಡು ದಿನ ಮಳೆ