ಜಿಟಿಜಿಟಿ ಮಳೆಗೆ ನಾನಾ ಅವಾಂತರ, ರೋಸಿಹೋದ ಬೆಂಗಳೂರಿಗರು

ಬೆಂಗಳೂರು, ಅ.15- ಇಂದು ಮುಂಜಾನೆಯಿಂದ ಸುರಿಯುತ್ತಿರುವ ಸೋನೆ ಮಳೆಗೆ ಸಿಲಿಕಾನ್ ಸಿಟಿ ಜನ ಸ್ಯಾನೆ ಬೇಸರ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಾಲಾ -ಕಾಲೇಜಿಗೆ ತೆರಳಲು ಹಾಗೂ ಉದ್ಯೋಗಿಗಳು ಕೆಲಸಕ್ಕೆ ತೆರಳಲು ಸಾಧ್ಯವಾಗದೆ ಬಿಟ್ಟು ಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ಹಿಡಿಶಾಪ ಹಾಕುತ್ತಿದ್ದಾರೆ. ನಗರದಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು ರೈಲ್ವೆ ಅಂಡರ್ ಪಾಸ್‌ಗಳು, ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿ ಹೋಗಿವೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ … Continue reading ಜಿಟಿಜಿಟಿ ಮಳೆಗೆ ನಾನಾ ಅವಾಂತರ, ರೋಸಿಹೋದ ಬೆಂಗಳೂರಿಗರು