Monday, December 2, 2024
Homeರಾಜ್ಯಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

Rain likely in many parts of the state including Bengaluru today

ಬೆಂಗಳೂರು, ನ. 30: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದು ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 1 ರಿಂದ 3 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಫೆಂಗಾಲ್‌ ಚಂಡಮಾರುತವು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುತ್ತಿದ್ದು ಮತ್ತು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯನ್ನು ಕಾರೈಕಲ್‌ ಮತ್ತು ಮಹಾಬಲಿಪುರಂ ನಡುವೆ ಪುದುಚೇರಿಗೆ ಇಂದು ಮಧ್ಯಾಹ್ನ ಭೂ ಪ್ರದೇಶ ಪ್ರವೇಶಿಸುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 70-80 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ತಮಿಳುನಾಡು, ಕೇರಳ, ಆಂಧ್ರದ ಕಡಲತೀರದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಎರಡು ವಾರಗಳಿಂದ ಕರ್ನಾಟಕದಲ್ಲಿ ಮೈಕೊರೆಯುವಷ್ಟು ಚಳಿ ಇತ್ತು. ಆದರೆ, ಕಳೆದ 24 ಗಂಟೆಯಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್‌‍ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌‍ ದಾಖಲಾಗಿದೆ. ಮಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 26, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌‍, ಮೈಸೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 22 ಮತ್ತು ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌‍ ದಾಖಲಾಗಿದೆ.

RELATED ARTICLES

Latest News