ಬೆಂಗಳೂರು,ಮಾ.7-ಬಂಗಾಳಕೊಲ್ಲಿಯಲ್ಲಿ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇಂದಿನಿಂದ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾ.9 ಮತ್ತು 10ರಂದು ಮಳೆಯಾಗಲಿದೆ. ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡುಗು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯಿದೆ. ಇಂದು ಬೆಳಗ್ಗೆ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಹನಿ ಬಿದ್ದಿದೆ.
