500 ಕೋಟಿ ರೂ. ವೆಚ್ಚದ ‘ರೈತ ಶಕ್ತಿ’ ಯೋಜನೆ ಘೋಷಣೆ

Social Share

ಬೆಂಗಳೂರು, ಮಾ.4- ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಿದ್ದು , 500 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆಯಲ್ಲಿಂದು 2022-23ನೆ ಸಾಲಿನ ಆಯವ್ಯಯ ಮಂಡಿಸಿದ ಅವರು, ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ 5 ಎಕರೆವರೆಗೆ ಡಿಬಿಟಿ ಮೂಲಕ ಡಿಸೇಲ್ ಸಹಾಯವನ್ನು ನೀಡಲು ರೈತ ಶಕ್ತಿ ಯೋಜನೆ ಜಾರಿಗೆ ತರುವ ಪ್ರಸ್ತಾಪ ಮಾಡಿದರು.
ರೈತರ ಆದಾಯವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ರಾಷ್ಟ್ರದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಸ್ಥಾಪಸಲಾಗಿದೆ. ರೈತರ ಉತ್ಪಾದಕರ ಸಂಸ್ಥೆಗಳ ಬಳಸಿ ಕೃಷಿಯ ಪ್ರಾಥಮಿಕ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಈ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಒದಗಿಸಲು ಸಹಕಾರಿಯಾಗಲಿದೆ.
ಕೇಂದ್ರ ಸರ್ಕಾರದ ಪಿಎಂ ಕಿಸನ್ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲೂ ಮುಂದುವರಿಸಲಾಗುತ್ತಿದ್ದು , ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಯಂತ್ರೋಪಕರಣಗಳು ಕೈಗೆಟ್ಟುಕುವಂತೆ ಮಾಡಲು ಮತ್ತು ಉತ್ಪಾದಕತೆ ಹೆಚ್ಚಿಸಲು ಕೃಷಿ ಯಂತ್ರಧಾರೆ ಕೇಂದ್ರಗಳನ್ನು ರಾಜ್ಯದ ಎಲ್ಲಾ ಹೋಬಳಿಗಳಿಗೂ ವಿಸ್ತರಿಸಲಾಗುವುದು ಎಂದರು.
ಕೆಪೆಕ್ ಮುಖಾಂತರ ರೈತರ ಉತ್ಪಾದಕರ ಸಂಸ್ಥೆಗಳಿಗೆ ಸಾಮಾನ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಿ ಕೊಯ್ಲಿನೋತ್ತರ ನಿರ್ವಹಣೆಯನ್ನು ಕೈಗೊಂಡು ಉತ್ಪನ್ನಗಳ ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

Articles You Might Like

Share This Article