ರಾಹುಲ್ ಗಾಂಧಿಗೆ ಎಐಸಿಸಿ ಪಟ್ಟ ಕಟ್ಟಲು
ರಾಜಸ್ಥಾನ ಕಾಂಗ್ರೆಸ್ ನಿರ್ಣಯ

Social Share

ಜೈಪುರ,ಸೆ.18-ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ರಾಜಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ನಿನ್ನೆ ನಡೆದ ಪಕ್ಷದ ಸದಸ್ಯರ ಸಭೆಯಲ್ಲಿ ಎರಡು ನಿರ್ಣಯಗಳನ್ನು ಮಂಡಿಸಲಾಗಿದೆ. ಪಕ್ಷದ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿರ್ಣಯಕ್ಕೆ ಎಲ್ಲರೂ ಬದ್ದವಾಗಿರುವುದು ಒಂದನೇ ನಿರ್ಣಯವಾದರೆ, ಮತ್ತೊಂದು ನಿರ್ಣಯವನ್ನು ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ಮಂಡಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲು ಮನವಿ ಮಾಡಲಾಗಿದೆ. ಇದಕ್ಕೆ ಎಲ್ಲರೂ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಕಚಾರಿಯ ವಾಸ್ ತಿಳಿಸಿದ್ದಾರೆ. ಈ ನಡುವೆ ಪಾಂಡೇಚರಿ ಪ್ರದೇಶ ಕಾಂಗ್ರೆಸ್ ಕೂಡ ಸರ್ವಾನುಮತದ ನಿರ್ಣಯ ಕೈಗೊಂಡು ರಾಹುಲ್ ಗಾಂಧಿ ಅವರನ್ನು ಮುಂದಿನ ಅಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಾಯಿಸಿದೆ.

ನಾಳೆ ನಡೆಯುವ ಹಿಮಾಚಲಪ್ರದೇಶ ಕಾಂಗ್ರೆಸ್ ಸಮಿತಿಯಲ್ಲೂ ಇದೇ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಸೆ.24ರಿಂದ ಅ.2ರವರೆಗೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಗಳು ನಡೆಯಲಿದ್ದು, ಏಕವ್ಯಕ್ತಿಯ ನಾಮಪತ್ರ ಸಲ್ಲಿಕೆಯಾಗಿದ್ದೇ ಆದರೆ ಚುನಾವಣೆ ನಡೆಯದೆ ಅವಿರೋಧ ಆಯ್ಕೆ ನಡೆಯಲಿದೆ.

ಇದನ್ನೂ ಓದಿ : ಅಶೋಕ್ ಮಾಡಿರುವ ಒತ್ತುವರಿ ಪಟ್ಟಿಯಲ್ಲಿ ಪದ್ಮನಾಭನಗರವೂ ಇದೆಯೇ..?

ಇತ್ತೀಚೆಗೆ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಐಕ್ಯತಾ ಪಾದಯಾತ್ರೆ ಹಮ್ಮಿಕೊಂಡಿದ್ದು, ತಾವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮೊದಲು ಚುನಾವಣಾಧಿಕಾರಿಯಾಗಿರುವ ಮಧುಸೂದನ್ ಮಿಸ್ತ್ರಿ ಅವರು, ಎಲ್ಲಾ ರಾಜ್ಯ ಘಟಕಗಳು ರಾಹುಲ್ ಗಾಂಧಿ ಅವರನ್ನೇ ಬೆಂಬಲಿಸಿ ಒಂದು ಸಾಲಿನ ನಿರ್ಣಯವನ್ನು ಕೈಗೊಂಡಿದ್ದೇ ಆದರೆ ಯಾರೂ ನಾಮಪತ್ರ ಸಲ್ಲಿಸದೆ ಹೋದರೆ ರಾಹುಲ್ ಗಾಂಧಿ ಅಧ್ಯಕ್ಷರಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಅದರಂತೆ ಕೆಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗುತ್ತಿದೆ. ಪ್ರದೇಶ ಕಾಂಗ್ರೆಸ್ ಸಮಿತಿಯಿಂದ 9 ಸಾವಿರ ಪ್ರತಿನಿಧಿಗಳಿದ್ದು, ಎಐಸಿಸಿಯ 1500 ಪ್ರತಿನಿಧಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.

Articles You Might Like

Share This Article