ಜೈಪುರ,ನ.12- ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಎಸ್‍ಐ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಎಸ್‍ಸಿ/ಎಸ್‍ಟಿ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಮತ್ತು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಐಜಿ ಉಮೇಶ್ ದತ್ತಾ ಅವರು ಸಬ್ ಇನ್ಸ್‍ಪೆಕ್ಟರ್ ಭೂಪೇಂದ್ರ ಸಿಂಗ್ ಅವರಿಗೆ ಶನಿವಾರ ವಜಾ ಪತ್ರ ನೀಡಿದ್ದಾರೆ ಎಂದು ಡಿಜಿಪಿ ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರನ್ನು ವಜಾಗೊಳಿಸಲು ಶುಕ್ರವಾರ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.
ಪ್ರಕರಣ ಬೆಳಕಿಗೆ ಬಂದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕುರಿತು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕೇಂದ್ರವು ಬೇಟಿ ಬಚಾವೋ ನಲ್ಲಿ ನಂಬಿಕೆ ಇಟ್ಟಿದ್ದರೆ, ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಆಡಳಿತವು ಅತ್ಯಾಚಾರಿಗಳು ಬಚಾವೋ ಆಗಿದೆ ಎಂದು ಆರೋಪಿಸಿದೆ.
ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್
ಈ ಘಟನೆಯನ್ನು ಖಂಡಿಸಿರುವ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ, ಇದು ಇಡೀ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ ಮತ್ತು ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಅವರಿಗೆ ಸೂಚಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಸಬ್ ಇನ್ಸ್‍ಪೆಕ್ಟರ್ ಕೋಣೆಗೆ ಕರೆದೊಯ್ದು ಶುಕ್ರವಾರ ಮಧ್ಯಾಹ್ನ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಶುಕ್ರವಾರವೇ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ದುಷ್ಕøತ್ಯದ ವರದಿಯನ್ನು ಮುಂದಿನ ಕ್ರಮಕ್ಕಾಗಿ ಜೈಪುರ ಗ್ರಾಮಾಂತರದ ಐಜಿಪಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.