ಜೈಪುರ,ಜೂ.1- ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧದ ತಮ್ಮ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸಚಿನ್ ಪೈಲಟ್ ಸ್ಪಷ್ಟಪಡಿಸಿದ್ದಾರೆ. ರಾಜಸ್ಥಾನ ಘಟಕದಲ್ಲಿನ ಜಗಳ ತಡೆಹಿಡಿಯುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ ಎಂಬ ಮಾತು ಕೇಳಿಬಂದ ಬೆನ್ನಲ್ಲೆ ಅಶೋಕ್ ಗೆಹ್ಲೋಟ್ ಸರ್ಕಾರದಿಂದ ತನ್ನ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಸಚಿನ್ ಪೈಲಟ್ ತಿಳಿಸಿದ್ದಾರೆ.
ಟೋಂಕ್ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಗೆಹ್ಲೋಟ್ ಅವರ ಅಧಿಕಾರ ಅಂತ್ಯಗೊಳ್ಳುವ ಕಾಲ ಸನ್ನಿಹಿತವಾಗಿದೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆ. ಹಾಗಾಗಿ ನಾಳೆ ಏನಾಗುತ್ತದೆ ಎಂದು ನೋಡೋಣ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ತಮ್ಮ ಐದು ದಿನಗಳ ಪಾದಯಾತ್ರೆಯನ್ನು ನಂತರ ಅಂತ್ಯಗೊಳಿಸುವಾಗ, ಇದು ಮತ್ತು ತಮ್ಮ ಇತರ ಎರಡು ಬೇಡಿಕೆಗಳನ್ನು ಈ ತಿಂಗಳ ಅಂತ್ಯದೊಳಗೆ ಈಡೇರಿಸಬೇಕು ಅಥವಾ ರಾಜ್ಯಾದ್ಯಂತ ಆಂದೋಲನವನ್ನು ಪ್ರಾರಂಭಿಸುವುದಾಗಿ ಹೇಳಿದರು.
ಗುದನಾಳದ ಮೂಲಕ ಚಿನ್ನ ಸಾಗಿಸುತ್ತಿದ್ದ ಮೂವರ ಬಂಧನ
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜಸ್ಥಾನದ ಇಬ್ಬರು ನಾಯಕರನ್ನು ಭೇಟಿಯಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಸೂಚಿಸಿದ್ದರು.ಆದರೆ ಟೋಂಕ್‍ನಲ್ಲಿ ಪೈಲಟ್ ಅವರು ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
ನಾನು ಪ್ರಸ್ತಾಪಿಸಿದ ಸಮಸ್ಯೆಗಳು, ವಿಶೇಷವಾಗಿ ಭ್ರಷ್ಟಾಚಾರದ ವಿಷಯ. ಹಿಂದಿನ ಬಿಜೆಪಿ ಆಡಳಿತದಲ್ಲಿ ಅಪಾರ ಭ್ರಷ್ಟಾಚಾರ ಮತ್ತು ಲೂಟಿ… ಅವುಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ ಎಂದು ಅವರು ತಮ್ಮ ವಾದವನ್ನು ಸಮರ್ಥಿಸಿಕೊಂಡಿದ್ದಾರೆ.
#Rajasthan, #SachinPilot, #AshokGehlot,