ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ನಲ್ಲಿ ಚಪ್ಪಲಿ ಸಾಗಾಣೆ

Social Share

ಜೈಪುರ,ಫೆ.24- ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್‍ನಲ್ಲಿ ಪಾದರಕ್ಷೆಗಳನ್ನು ಸಾಗಿಸಿರುವ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.ಜೈಪುರದಿಂದ ದೌಸಾಗೆ ಸಾಗುತ್ತಿದ್ದ ಸರ್ಕಾರಿ ಆ್ಯಂಬುಲೆನ್ಸ್‍ನಲ್ಲಿ ಪಾದರಕ್ಷೆಗಳನ್ನು ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಆ್ಯಂಬುಲೆನ್ಸ್ ಚಾಲಕನನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ದೌಸಾ ಸರ್ಕಾರಿ ಆಸ್ಪತ್ರೆಯ ಪ್ರಧಾನ ವೈದ್ಯಾಕಾರಿ ಡಾ.ಶಿವರಾಮ್ ಮೀನಾ ತಿಳಿಸಿದ್ದಾರೆ.

ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ ಬ್ಲಿಂಕೆನ್

ಮಾತ್ರವಲ್ಲ, ಆ್ಯಂಬುಲೆನ್ಸ್‍ನಲ್ಲಿ ಪಾದರಕ್ಷೆ ಸಾಗಿಸಿದ ಪ್ರಕರಣದ ತನಿಖೆಗೆ ಸಮಿತಿ ರಚನೆ ಮಾಡಲಾಗಿದೆ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಘೋಷಿಸಿದ್ದಾರೆ.

ಅಗತ್ಯವಿದ್ದಲ್ಲಿ, ಆರೋಪಿಗಳ ವಿರುದ್ಧ ಸಂಬಂತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗುತ್ತದೆ. ಇದು ಗಂಭೀರ ವಿಷಯವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ನಾನು ಭರವಸೆ ನೀಡುತ್ತೇನೆ ಎಂದು ಮೀನಾ ಹೇಳಿದ್ದಾರೆ.

#Rajasthanshocker, #Dausahospital, #Ambulance, #ignores, #patients, #transports, #footwear, #videoviral,

Articles You Might Like

Share This Article